ಜೆಎಸ್ಎಸ್ ಶಾಲೆ ರಾಜ್ಯಮಟ್ಟದಲ್ಲಿ ಸಾಧನೆ
JSS School achieves at the state level
ತಾಳಿಕೋಟಿ 24: ತಾಲೂಕಿನ ಕೊಡಗಾನೂರ ಗ್ರಾಮದ ಬೇಲೂರ ಕ್ರಾಸ್ ನಲ್ಲಿರುವ ಜೆಎಸ್ಎಸ್ ಶಾಲೆಯ ವಿದ್ಯಾರ್ಥಿಗಳು 2025-26 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಉತ್ತಮ ಸಾಧನೆ ತೋರಿದ್ದಾರೆ. ಆಂಗ್ಲ ಮಾಧ್ಯಮ ವಿದ್ಯಾರ್ಥಿನಿ ಕುಮಾರಿ ಸೌಪರ್ಣಿಕಾ ಪಾಟೀಲ 625ಕ್ಕೆ 623 ಅಂಕಗಳನ್ನು ಪಡೆದು ರಾಜ್ಯಕ್ಕೆ 3ನೇ ಸ್ಥಾನ ಪಡೆದುಕೊಂಡಿದ್ದಾಳೆ.
ಕನ್ನಡ ಮಾಧ್ಯಮದಲ್ಲಿ ಕುಮಾರ ನಜೀರ ಸೋಂಪುರ 625ಕ್ಕೆ 610 ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾನೆ. ಆಂಗ್ಲ ಮಾಧ್ಯಮದಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 38 ವಿದ್ಯಾರ್ಥಿಗಳಲ್ಲಿ ಡಿಸ್ಟಿಂಕ್ಷನ್ 25 ಮತ್ತು ಪ್ರಥಮ ಶ್ರೇಣಿಯಲ್ಲಿ 12 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಕನ್ನಡ ಮಾಧ್ಯಮದಲ್ಲಿ ಪರೀಕ್ಷೆಗೆ ಹಾಜರದ ಒಟ್ಟು 83 ವಿದ್ಯಾರ್ಥಿಗಳಲ್ಲಿ ಡಿಸ್ಟಿಂಕ್ಷನ್ 44 ಮತ್ತು ಪ್ರಥಮ ಶ್ರೇಣಿಯಲ್ಲಿ 36 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ.
ಪರೀಕ್ಷೆಯಲ್ಲಿ ಅಮೋಘ ಸಾಧನೆ ಮಾಡಿ ಸಂಸ್ಥೆಯ ಕೀರ್ತಿ ಹೆಚ್ಚಿಸಿದ ಈ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷ ಸಿದ್ದನಗೌಡ ಗಬಸಾವಳಗಿ, ಕಾರ್ಯದರ್ಶಿ ಸಾಹೇಬಗೌಡ ಗಬಸಾವಳಗಿ ಮತ್ತು ಶಾಲೆಯ ಶಿಕ್ಷಕ ವರ್ಗದವರು ಅಭಿನಂದಿಸಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 