ಜಗದ್ಗುರುಗಳ ಆಗಸ್ಟ್ ಧಾರ್ಮಿಕ ಪ್ರವಾಸ ವೇಳಾಪಟ್ಟಿ ಪ್ರಕಟ
Jagadguru's August religious tour schedule announced
ಲೋಕದರ್ಶನ ವರದಿ
ರಬಕವಿ-ಬನಹಟ್ಟಿ 01 : ಶ್ರೀಶೈಲ ಪೀಠದ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳವರ ಆಗಸ್ಟ್ ತಿಂಗಳ ಧಾರ್ಮಿಕ ಪ್ರವಾಸ ಹಾಗೂ ಶ್ರಾವಣ ಮಾಸದ ವಿಶೇಷ ಅನುಷ್ಠಾನಗಳ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ಆಗಸ್ಟ್ 1ರಂದು ಚಿಕ್ಕೋಡಿ ತಾಲ್ಲೂಕಿನ ಅಂಕಲಿಯಲ್ಲಿ ನಡೆಯುವ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಜಗದ್ಗುರುಗಳು ಭಾಗವಹಿಸಲಿದ್ದಾರೆ. ಆಗಸ್ಟ್ 2ರಿಂದ 4ರವರೆಗೆ ಬಳ್ಳಾರಿ ಜಿಲ್ಲೆಯ ಶಿರಗುಪ್ಪದಲ್ಲಿ ಸಾಮೂಹಿಕ ಇಷ್ಟಲಿಂಗ ಮಹಾಪೂಜೆ ಹಾಗೂ ಧಾರ್ಮಿಕ ಆಶೀರ್ವಚನ ಕಾರ್ಯಕ್ರಮಗಳನ್ನು ನೆರವೇರಿಸಲಿದ್ದಾರೆ. ಆಗಸ್ಟ್ 5ರಂದು ಗಂಗಾವತಿಯಲ್ಲಿ ಇಷ್ಟಲಿಂಗ ಮಹಾಪೂಜೆ ಹಾಗೂ ಧರ್ಮಜಾಗೃತಿ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಲಿದ್ದಾರೆ.
ಆಗಸ್ಟ್ 16ರಿಂದ ಸೆಪ್ಟೆಂಬರ್ 11ರವರೆಗೆ ಆಂಧ್ರ್ರದೇಶದ ಶ್ರೀಶೈಲದಲ್ಲಿ ನಡೆಯುವ ಶ್ರಾವಣ ಮಾಸದ 16ನೇ ವರ್ಷದ ಇಷ್ಟಲಿಂಗ ಮಹಾಪೂಜಾ ತಪೋನುಷ್ಠಾನಕ್ಕೆ ಜಗದ್ಗುರುಗಳು ನೇತೃತ್ವ ವಹಿಸಲಿದ್ದಾರೆ. ಈ ಅವಧಿಯಲ್ಲಿ ಪ್ರತಿದಿನ ಬೆಳಿಗ್ಗೆ 7 ಗಂಟೆಗೆ ಸಾಮೂಹಿಕ ಇಷ್ಟಲಿಂಗ ಮಹಾಪೂಜೆ ಹಾಗೂ ಸಂಜೆ 6 ಗಂಟೆಗೆ ಶ್ರೀ ಅಕ್ಕ ಮಹಾದೇವಿ ಪುರಾಣ ಪ್ರವಚನ ನಡೆಯಲಿದೆ.
ಆಗಸ್ಟ್ 20ರಂದು ಶ್ರೀಶೈಲದಲ್ಲಿ ಸಾಮೂಹಿಕ ಅಯ್ಯಾಚಾರ ಹಾಗೂ ಲಿಂಗದೀಕ್ಷೆ ಕಾರ್ಯಕ್ರಮ ಜರುಗಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶ್ರೀಶೈಲ ಪೀಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 