ಬೆಂಗಳೂರು, ಜು 28 ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಜೈಪಾಲ್ ರೆಡ್ಡಿ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ಬಹಳ ನೋವಾಗಿದೆ ಎಂದು ಮಾಜಿ ಪ್ರಧಾನ ಮಂತ್ರಿ ಹಾಗೂ ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ ದೇವೇಗೌಡ ತೀವ್ರ ಸಂತಾಪ ಸೂಚಿಸಿದ್ದಾರೆ.
ನಾನು ಪ್ರಧಾನ ಮಂತ್ರಿ ಆಗಿದ್ದಾಗ ಸಂಪುಟದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದೆವು. ಜೈಪಾಲ್ ರೆಡ್ಡಿ ಅವರು ಒಬ್ಬ ಸರಳ ಸಜ್ಜನಿಕೆಯ ವ್ಯಕ್ತಿ. ಅವರ ಅಗಲಿಕೆಯಿಂದ ನಾವೆಲ್ಲ ಒಬ್ಬ ಮಾರ್ಗದರ್ಶಕರನ್ನು ಕಳೆದುಕೊಂಡಂತಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ತುಂಬಲಿ ಎಂದು ಅವರು ಹೇಳಿದ್ದಾರೆ