ನವದಹೆಲಿ, ಅ.16: ಕಳೆದ ಮೇ ತಿಂಗಳಲ್ಲಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಗೊಳಗಾಗಿದ್ದು, ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಅರುಣ್ ಜೇಟ್ಲಿ ಅವರು ಇಂದು ತಮ್ಮ ಹಣಕಾಸು ಸಚಿವಾಲಯದ ಅಧಿಕಾರವನ್ನು ವಹಿಸಿಕೊಳ್ಳುವ ಸಾಧ್ಯತೆ ಇದೆ.
ಮೇಲ್ಮನೆ ನಾಯಕರೂ ಆಗಿರುವ ಬಿಜೆಪಿ ಹಿರಿಯ ನಾಯಕ ಜೇಟ್ಲಿ ಅವರು, ಈಚೆಗೆ ರಾಜ್ಯಸಭಾ ಉಪಾಧ್ಯಕ್ಷರನ್ನು ಚುನಾಯಿಸುವ ಮತದಾನದಲ್ಲಿ ಪಾಲ್ಗೊಂಡಿದ್ದರು.
ರಾಜ್ಯಸಭಾ ಕಲಾಪದ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು ಜೇಟ್ಲಿ ಅವರನ್ನು ಸ್ವಾಗತಿಸಿದ್ದರು.