ಬೆಳಗಾವಿ 25: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಪೊಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ಸೇನಾ ವಾಹನ 150 ಅಡಿ ಕಮರಿಗೆ ಉರುಳಿಬಿದ್ದು ಐವರು ಯೋಧರು ಹುತಾತ್ಮರಾಗಿದ್ದಾರೆ, ಒಬ್ಬರು ಗಾಯಗೊಂಡಿದ್ದರು. ಈ ಅಪಘಾತದಲ್ಲಿ ಕರ್ನಾಟಕದ ಮೂವರು ಹುತಾತ್ಮರಾಗಿದ್ದು,
ಹುತಾತ್ಮ ಯೋಧರನ್ನು ಬೆಳಗಾವಿ ಬಳಿಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್ ದಯಾನಂದ ತಿರಕಣ್ಣವರ (45) ಕುಂದಾಪುರ ಬಳಿಯ ಕೋಟೇಶ್ವರ ಬಿಜಾಡಿಯ ಅನೂಪ್ (33) ಮಹಾಲಿಂಗಪುರದ 25 ವರ್ಷದ ಮಹೇಶ್ ಮರಿಗೊಂಡ ಎಂದು ಗುರುತಿಸಲಾಗಿದೆ.
ಇಂದು ಮಧ್ಯಾಹ್ನದ ವೇಳೆಗೆ ಪಾರ್ಥಿವ ಶರೀರ ಗ್ರಾಮಕ್ಕೆ ಬರುವ ನಿರೀಕ್ಷೆಯಿದೆ.