ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್‌ನಿಂದ ಜಾಮೀನು
Janardhana Reddy granted bail by Telangana High Court
ಹೈದರಾಬಾದ್ 11: ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಜನಾರ್ದನ ರೆಡ್ಡಿ ಅವರಿಗೆ ತೆಲಂಗಾಣ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಜತೆಗೆ, ರೆಡ್ಡಿಗೆ ಸಿಬಿಐ ನ್ಯಾಯಾಲಯವು ವಿಧಿಸಿದ್ದ ಏಳು ವರ್ಷಗಳ ಜೈಲು ಶಿಕ್ಷೆಯನ್ನು ಈ ಹಂತದಲ್ಲಿ ಜಾರಿಗೊಳಿಸುವ ಅಗತ್ಯವಿಲ್ಲ ಎಂದು ಕೋರ್ಟ್ ತೀರ್ಪು ನೀಡಿದೆ.
ಈ
ಪ್ರಕರಣದಲ್ಲಿ ರೆಡ್ಡಿ ಸೇರಿದಂತೆ ಶಿಕ್ಷೆಗೊಳಗಾಗಿರುವ ಇತರ ಮೂವರ ಜಾಮೀನು ಅರ್ಜಿಗಳನ್ನು ಸಹ ಹೈಕೋರ್ಟ್ ಅಂಗೀಕರಿಸಿದೆ.
ಮೇ
6ರಂದು ಓಬಳಾಪುರಂ ಮೈನಿಂಗ್ ಕಂಪನಿಗೆ ಸಂಬಂಧಿಸಿದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯವು ಅಂತಿಮ ತೀರ್ಪು ನೀಡಿ ಏಳು ವರ್ಷಗಳ ಶಿಕ್ಷೆ ವಿಧಿಸಿತ್ತು. ಜನಾರ್ದನ ರೆಡ್ಡಿ ಜತೆಗೆ, ಶ್ರೀನಿವಾಸ್ ರೆಡ್ಡಿ, ವಿ.ಡಿ.ರಾಜಗೋಪಾಲ್
ಮತ್ತು ಅಲಿ ಖಾನ್ ದೋಷಿಗಳೆಂದು ಘೋಷಿಸಿತ್ತು. ಈ ತೀರ್ಪು ಪ್ರಶ್ನಿಸಿ
ರೆಡ್ಡಿ ತೆಲಂಗಾಣ ಹೈಕೋರ್ಟ್ ಮೊರೆ ಹೋಗಿದ್ದರು.
ಜಾಮೀನು ಅರ್ಜಿ ವಿಚಾರಣೆ ನಡೆಸಿದ ತೆಲಂಗಾಣ ಹೈಕೋರ್ಟ್, ಜರ್ನಾದನ ರೆಡ್ಡಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಜತೆಗೆ, ತಲಾ ₹10 ಲಕ್ಷ ಮೌಲ್ಯದ ಇಬ್ಬರು ಶ್ಯೂರಿಟಿಗಳನ್ನು ಸಲ್ಲಿಸುವಂತೆ ಸೂಚನೆ ನೀಡಿದೆ. ನ್ಯಾಯಾಲಯದ ಪೂರ್ವಾನುಮತಿ ಇಲ್ಲದೆ ದೇಶ ಬಿಟ್ಟು ಹೋಗುವಂತಿಲ್ಲ. ಪಾಸ್‌ಪೋರ್ಟ್ ಅನ್ನು ಒಪ್ಪಿಸುವಂತೆಯೂ ಆದೇಶಿಸಿದೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 