ಜನಾರ್ದನ ರೆಡ್ಡಿ ನನ್ನನ್ನು ರಾಜಕೀಯವಾಗಿ ಮುಗಿಸಲು ಯತ್ನಿಸುತ್ತಿದ್ದಾರೆ: ಬಿ ಶ್ರೀರಾಮುಲು
Janardhana Reddy is trying to finish me off politically: B Sriramulu
ಬೆಂಗಳೂರು 22: ನನ್ನನ್ನು ರಾಜಕೀಯವಾಗಿ ಮುಗಿಸಲು ಜನಾರ್ದನ ರೆಡ್ಡಿ ಯತ್ನಿಸುತ್ತಿದ್ದಾರೆ ಎಂದು ಮಾಜಿ ಸಚಿವ ಬಿ ಶ್ರೀರಾಮುಲು ಅವರು ತಮ್ಮ ಆಪ್ತ ಸ್ನೇಹಿತ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆಗೆ ಕೌಂಟ್‌ಡೌನ್ ಶುರುವಾಗಿದೆ. ಹೀಗಾಗಿ ರಾಜ್ಯಕ್ಕೆ ಬಂದಿರುವ ಕರ್ನಾಟಕ ಉಸ್ತುವಾರಿ ರಾಧಾ ಮೋಹನ್ ದಾಸ್ ಅವರು ನಿನ್ನೆ ಸಂಜೆ ಕೋರ್ ಕಮಿಟಿ ಸಭೆ ನಡೆಸಿದರು.
ಕೋರ್ ಕಮಿಟಿ ಸಭೆಯಲ್ಲಿ ಸಂಡೂರು ವಿಧಾನಸಭೆ ಉಪಚುನಾವಣೆ ಸೋಲಿನ ಬಗ್ಗೆ ಚರ್ಚೆಯಾಗಿದ್ದು, ಈ ವೇಳೆ ನೀವು ಸರಿಯಾಗಿ ಕೆಲಸ ಮಾಡಿಲ್ಲ ಎಂದು ಶ್ರೀರಾಮುಲು ವಿರುದ್ಧವೇ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರು ಗಂಭೀರ ಆರೋಪ ಮಾಡಿದ್ದಾರೆ. ಇದರಿಂದ ತೀವ್ರ ಅಸಮಾಧಾನಗೊಂಡ ಶ್ರೀರಾಮುಲು, ಇನ್ನೂ ಕೂಡ ಉಪಚುನಾವಣೆ ಸೋಲಿನ ಕುರಿತ ವರದಿಯನ್ನೇ ಕೊಟ್ಟಿಲ್ಲ. ಸದಾನಂದ ಗೌಡ ಸಮಿತಿ ಉಪ ಚುನಾವಣೆ ಕುರಿತ ವರದಿಯನ್ನೇ ಕೊಟ್ಟಿಲ್ಲ. ಅದಕ್ಕೂ ಮೊದಲು ನೀವು ಹೇಗೆ ಕೆಲಸ ಮಾಡಿಲ್ಲ ಎನ್ನುತ್ತಿರಿ ಎಂದು ಶ್ರೀರಾಮುಲು, ಸಭೆಯಲ್ಲೇ ಪ್ರಶ್ನಿಸಿದ್ದಾರೆ.
ಇನ್ನು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಶ್ರೀರಾಮುಲು, ಉಪಚುನಾವಣೆಯಲ್ಲಿ ನಾನು ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡಿದ್ದೇನೆ. ಕ್ಷೇತ್ರಕ್ಕೆ ಹೋಗಿ ಕೇಳಿದ್ರೆ ನನ್ನ ಕೆಲಸದ ಬಗ್ಗೆ ಎಲ್ಲರೂ ಹೇಳುತ್ತಾರೆ. ನಾನು ಕೆಲಸ ಮಾಡಿಲ್ಲ ಎಂಬರ್ಥದಲ್ಲಿ ಹೇಳಿಕೆ ನೀಡಿದ್ದಾರೆ. ರಾಧಾಮೋಹನ್ ದಾಸ್ ಆರೋಪದಿಂದ ನನಗೆ ನೋವಾಗಿದೆ ಎಂದಿದ್ದಾರೆ.
ನನ್ನ ಬಗ್ಗೆ ತಿಳಿದುಕೊಂಡು ರಾಧಾಮೋಹನ್ ದಾಸ್ ಮಾತನಾಡಬೇಕಿತ್ತು. ರಾಧಾಮೋಹನ್ ದಾಸ್ ಅವರು ಉತ್ತರಪ್ರದೇಶ ರಾಜ್ಯದವರು ಅವರಿಗೆ ಇಲ್ಲಿನ ಕೆಲವು ವಿಚಾರಗಳು ಗೊತ್ತಿರುವುದಿಲ್ಲ. ನನ್ನ ಬಗ್ಗೆ ಲಘುವಾಗಿ ಮಾತನಾಡುವುದು ಒಳ್ಳೆಯದಲ್ಲ ಎಂದು ಹೇಳಿದ್ದೇನೆ. ಸಭೆಯಲ್ಲಿ ಈ ವಿಚಾರವನ್ನು ರಾಜ್ಯಾಧ್ಯಕರಿಗೂ ತಿಳಿಸಿದ್ದೇನೆ. ನಾನು ಕೆಲಸ ಮಾಡಿಲ್ಲ ಎಂದು ಜನಾರ್ದನರೆಡ್ಡಿ ಹೇಳರೋದು ಸ್ಪಷ್ಟವಾಗಿದೆ ಎಂದರು.
ಜನಾರ್ದನ ರೆಡ್ಡಿ ನನ್ನನ್ನು ರಾಜಕೀಯವಾಗಿ ಮುಗಿಸಲು ಯತ್ನಿಸುತ್ತಿದ್ದಾರೆ. ರೆಡ್ಡಿ ಮಾತು ಕೇಳಿ ನನ್ನ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ ಎಂದು ಶ್ರೀರಾಮುಲು, ರೆಡ್ಡಿ ವಿರುದ್ಧ ಕಿಡಿಕಾರಿದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 