ಜನತಾ ದರ್ಶನ : 1067 ಅಹವಾಲುಗಳ ಸ್ವೀಕೃತಿ
Janata Darshan: 1067 petitions received
ಗದಗ 28 : ಶುಕ್ರವಾರ ಜರುಗಿದ ಜಿಲ್ಲಾ ಮಟ್ಟದ ಜನತಾ ದರ್ಶನದಲ್ಲಿ ಜನಸಾಮಾನ್ಯರಿಂದ ಅಹವಾಲುಗಳ ಮಹಾಪೂರವೆ ಹರಿದು ಬಂದಿದೆ.ಸಾರ್ವಜನಿಕರಿಂದ 767 ಅಹವಾಲುಗಳು ನೇರವಾಗಿ ದಾಖಲಾಗಿವೆ, 300 ಆನ್ ಲೈನ್ ಮೂಲಕ ಅರ್ಜಿಗಳು ಬಂದಿದ್ದು, ಒಟ್ಟು 1067 ವಿವಿಧ ರೀತಿಯ ಅಹವಾಲುಗಳು ಜನತಾ ದರ್ಶನದಲ್ಲಿ ಸ್ವೀಕೃತವಾಗಿವೆ.ಇವುಗಳಲ್ಲಿ 900 ಅರ್ಜಿಗಳನ್ನು ಪರೀಶೀಲನೆ ಮಾಡಲಾಗಿದೆ. 150 ಅಹವಾಲುಗಳನ್ನು ವಿವರವಾಗಿ ಪರೀಶಿಲನೆ ನಡೆಸಲಾಗಿದೆ.ಜನತಾ ದರ್ಶನ ಕಾರ್ಯಕ್ರಮ ಅತ್ಯಂತ ಶಾಂತಿ, ಶಿಸ್ತಿನಿಂದ ಜರುಗಿದ್ದು, ಇದಕ್ಕೆ ಡಿಸಿ ಸಿ ಎನ್ ಶ್ರೀಧರ, ಎಸ್ಪಿ ರೋಹನ್ ಜಗದೀಶ್, ಡಿಸಿಎಪ್ ಸಂತೋಷ ಕುಮಾರ ಸೇರಿದಂತೆ ಎಲ್ಲ ಅಧಿಕಾರಿಗಳು ಕಾರಣೀಕರ್ತರಾಗಿದ್ದಾರೆ, ಎಲ್ಲರೀಗೂ ಅಭಿನಂದನೆಗಳು ಎಂದು ಸಚಿವ ಎಚ್ ಕೆ ಪಾಟೀಲ ಹೇಳಿದರು.ಡಾ. ವೆಂಕಟೇಶ ಆಲ್ಕೊಡ್ ತಂಡದ ಪ್ರಾರ್ಥನೆ, ನಾಡಗೀತೆಯೊಂದಿಗೆ ಆರಂಭವಾದ ಜನತಾ ದರ್ಶನ ಅಂತಿವಮಾಗಿ ಪೊಲೀಸ್ ಬ್ಯಾಂಡನ ರಾಷ್ಟ್ರಗೀತೆಯೊಂದಿಗೆ ಮುಕ್ತಾಯವಾಯಿತು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 