ಪ್ರವಾಹ ಭೀತಿ ಹಿನ್ನೆಲೆ: ಇಂದು ಮಹಾರಾಷ್ಟ್ರ ಸಚಿವರೊಂದಿಗೆ ಜಾರಕಿಹೊಳಿ ಸಭೆ

ಬೆಂಗಳೂರು, ಜು.8: ಮಳೆಗಾಲದ ಸಂದರ್ಭದಲ್ಲಿ ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಉಂಟಾಗುವ ಪ್ರವಾಹ  ನಿರ್ವಹಿಸುವ ಕುರಿತು ಮಹಾರಾಷ್ಟ್ರ ಸರ್ಕಾರದ ಸಚಿವರೊಂದಿಗೆ ಜಲ ಸಂಪನ್ಮೂಲ ಸಚಿವ ರಮೇಶ್  ಜಾರಕಿಹೊಳಿ ಇಂದು ಚರ್ಚೆ ನಡೆಸಲಿದ್ದಾರೆ.

ಮಹಾರಾಷ್ಟ್ರದ ಸಚಿವ ಜಯಂತ್ ಪಾಟೀಲ್  ಜೊತೆಗೆ ಕೃಷ್ಣಾ ಹಾಗೂ ಭೀಮಾ ನದಿಯಲ್ಲಿ ಪ್ರವಾಹ ಉಂಟಾಗುವ ಕುರಿತು ಚರ್ಚಿಸಿ ಎರಡೂ  ರಾಜ್ಯಗಳ ಅಧಿಕಾರಿಗಳ ನಡುವೆ ಸಮನ್ವಯತೆ ತರುವ ಮೂಲಕ ಕರ್ನಾಟಕದಲ್ಲಿ ಪ್ರವಾಹ  ನಿಯಂತ್ರಿಸುವ ಕುರಿತು ಚರ್ಚೆ ನಡೆಸಲಿದ್ದಾರೆ. 

ಇದೇ ವೇಳೆ, ಬೇಸಿಗೆಯಲ್ಲಿ ಕೃಷ್ಣಾ ನದಿ ನೀರು ಹಂಚಿಕೆ ಕುರಿತಂತೆಯೂ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.