ವಿಶ್ವ ಮಾನಸಿಕ ಆರೊಗ್ಯ ದಿನಾಚರಣೆ 2025 ರ ಅಂಗವಾಗಿ ಜಾಥಾ ಕಾರ್ಯಕ್ರಮ ಯಶಸ್ವಿ
Jatha program as part of World Mental Health Day 2025 a success
ವಿಶ್ವ ಮಾನಸಿಕ ಆರೊಗ್ಯ ದಿನಾಚರಣೆ 2025 ರ ಅಂಗವಾಗಿ ಜಾಥಾ ಕಾರ್ಯಕ್ರಮ ಯಶಸ್ವಿ
ಧಾರವಾಡ ಅ.14: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಪೋಲಿಸ್ ಇಲಾಖೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಾನಸಿಕ ಆರೊಗ್ಯ ದಿನಾಚರಣೆ 2025 ರ ಅಂಗವಾಗಿ ಜಾಥಾ ಕಾರ್ಯಕ್ರಮವನ್ನು ಇಂದು (ಅ.14) ಬೆಳಿಗ್ಗೆ 9 ಧಾರವಾಡ ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಆವರಣದಿಂದ ಹಮ್ಮಿಕೊಳ್ಳಲಾಯಿತು.
ತುರ್ತು ಪರಿಸ್ಥಿತಿ ಮತ್ತು ವಿಪತ್ತುಗಳಲ್ಲಿ ಮಾನಸಿಕ ಆರೋಗ್ಯ ಸೇವೆಗಳ ಲಭ್ಯತೆ ಈ ವರ್ಷದ ಘೋಷವಾಕ್ಯದೊಂದಿಗೆ ಜಾಥಾ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಫರಶುರಾಮ ಎಫ್. ದೊಡ್ಡಮನಿ ಅವರು ಉದ್ಘಾಟಸಿ ಮಾತನಾಡಿ, ಶಾಲಾ- ಕಾಲೇಜುಗಳಲ್ಲಿ ಮತ್ತು ಸಮುದಾಯಗಳಲ್ಲಿ ಮಾನಸಿಕ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್. ಎಮ್ ಹೊನಕೇರಿ ಅವರು ಮಾತನಾಡಿ, ಮಾನಸಿಕ ಆರೋಗ್ಯದ ಕುರಿತು ಸಮುದಾಯದಲ್ಲಿ ಹೆಚ್ಚಿನ ಅರಿವು ಮೂಡಿಸುವುದು ಅಗತ್ಯವಿದೆ ಎಂದು ತಿಳಿಸಿದರು.
ಜಾಥಾ ಕಾರ್ಯಕ್ರಮದಲ್ಲಿ ಡಾ. ಎಸ್. ಬಿ. ಕಳಸೂರಮಠ, ಡಾ. ಸುಜಾತಾ ಹಸವಿಮಠ, ಡಾ. ಮಂಜುನಾಥ ಎಸ್., ಡಾ. ಮಹೇಶ ಚಿತ್ತರಗಿ, ಡಾ. ರವೀಂದ್ರ ಬೋವೇರ, ಡಾ. ಫರಶರಾಮ ಎಫ್. ಕೆ., ಡಾ. ತನುಜಾ ಕೆ. ಎನ್., ಬಿ. ಆರ್ ಪಾತ್ರೋಟ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಸಿಬ್ಬಂದಿಯವರು ಹಾಗೂ ಶ್ರೇಯಾ ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 