ವಿವಿಧ ಬೇಡಿಕೆಗಳನ್ನು ಈಡೇರಿಸಲು ಜಯ ಕರ್ನಾಟಕ ರಕ್ಷಣಾ ಸೇನೆ ಆಗ್ರಹ

ವಿವಿಧ ಬೇಡಿಕೆಗಳನ್ನು ಈಡೇರಿಸಲು ಜಯ ಕರ್ನಾಟಕ ರಕ್ಷಣಾ ಸೇನೆ ಆಗ್ರಹ Jaya Karnataka Rakshana Sene demands to fulfill various demands

ವಿಜಯಪುರ 09 : ವಿಜಯಪುರ ತಾಲ್ಲೂಕಿನ ಆಹೇರಿ ಗ್ರಾಮ ಪಂಚಾಯತಿ ವಾಪ್ತಿಯಲ್ಲಿನ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯ ಒದಗಿಸುವಂತೆ ಒತ್ತಾಯಿಸಿ  ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಜಯ ಕರ್ನಾಟಕ ರಕ್ಷಣಾ ಸೇನೆ  ಪದಾಧಿಕಾರಿಗಳು ಮನವಿ ಸಲ್ಲಿಸಿದರು. 

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಕೃಷ್ಣಾ ಭೋಸಲೆ ಮಾತನಾಡಿ,  ವಿಜಯಪುರ ತಾಲೂಕಿನ ಆಹೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹಲವಾರು ಮೂಲಭೂತ ಸೌಕರ್ಯಗಳ ಕೊರತೆಯಿಂದ ಬಳಲುತ್ತಿದೆ. ಈಗಾಗಲೇ ಹಲವಾರು ಬಾರಿ ಸೌಕರ್ಯಗಳನ್ನು ಒದಗಿಸಬೇಕೆಂದು ಗ್ರಾಮಸ್ಥರು ಮನವಿ ಸಲ್ಲಿಸಿದರು ಯಾವುದೇ ರೀತಿಯಾಗಿ ಅಧಿಕಾರಿಗಳು ಸ್ಪಂದಿಸಿಲ್ಲ. ಕೂಡಲೇ ಗಂಭೀರವಾಗಿ ಪರಿಗಣಿಸಬೇಕು. ನಮ್ಮೂರು ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿ ಗಳಿಗೆ ಶೌಚಾಲಯ ಒದಗಿಸಬೇಕು. ಊರಲ್ಲಿ ವಿದ್ಯುತ್ ಕಂಬಗಳಿಗೆ ಬಲ್ಪ ಅಳವಡಿಸುವುದು. ಊರಲ್ಲಿ ಚರಂಡಿ ಗಳನ್ನು ಸ್ವಚ್ಛಸಬೇಕು.  ರೈತರಿಗೆ ಹಾಗೂ ಸಾರ್ವಜನಿಕರಿಗೆ ಸರಕಾರಿ ಯೋಜನೆಗಳು ಒದಗಿಸಬೇಕು ಹಾಗೂ ಅವುಗಳ ಕುರಿತು ಅರಿವು ನೀಡಬೇಕು. ಗ್ರಾಮ ಸಭೆ ಮಾಡುವಾಗ ಊರಲ್ಲಿ ಡಂಗೂರ ಬಾರಿಸುವ ಮೂಲಕ ತಿಳಿಸಬೇಕು. ಕಾನೂನು ವಿರೋಧಿ ಕೆಲಸಗಳಿಗೆ ಮಟ್ಟಹಾಕಿ. ಸಾರ್ವಜನಿಕರ ಕೆಲಸಗಳನ್ನು ಪಾರದರ್ಶಕವಾಗಿ ಮಾಡಿಕೊಡಬೇಕು. ಊರಲ್ಲಿ ಕಳಪೆ ಗುಣಮಟ್ಟದ ಕಾಮಗಾರಿ ನಿರ್ಮಾಣ ಮಾಡವವರನ್ನು ಕಪ್ಪು ಪಟ್ಟಿಗೆ ಸೇರಿಸಿ ಅವರ ಪರವಾನಿಗೆಯನ್ನು ರದ್ದುಗೊಳಿಸಬೇಕು. ಖಅ/ಖಖಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡದೆ ಇರುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಈ ಎಲ್ಲ ಬೇಡಿಕೆಗಳನ್ನು ಸಂಬಂಧ ಪಟ್ಟ ಅಧಿಕಾರಿಗಳು ಲಿಖಿತವಾಗಿ ಭರವಸೆ ನೀಡಬೇಕು. ಅವುಗಳನ್ನು ಈಡೇರಿಸಬೇಕು. ಒಂದು ವೇಳೆ ಈಡೇರಿಸದೇ ಹೋದಲ್ಲಿ ಉಗ್ರವಾದ ಧರಣಿ ಸತ್ಯಾಗ್ರಹ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು. 

ರಾಜ್ಯ ಉಪಾಧ್ಯಕ್ಷರಾದ ಮಂಜುಳಾ ವಾಲಿ ಮಾತನಾಡಿ, ಸಂಘಟನೆಯನ್ನು ಎಲ್ಲರೂ ಸೇರಿ ಮಾಡಬೇಕು. ಜಿಲ್ಲೆಯ ಅಭಿವೃದ್ಧಿಯಾಗಬೇಕಾದರೆ ಸಾರ್ವಜನಿಕರನ್ನು ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು. 

ಈ ಸಂರ್ದಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಬಸವರಾಜ ಗಳವೆ, ವಿಜಯಪುರ ತಾಲೂಕಾ ಅಧ್ಯಕ್ಷರಾದ ವಿಠ್ಠಲ ತಳವಾರ, ಯುವ ಘಟಕ ಅಧ್ಯಕ್ಷರಾದ ರಾಜು ಬಿಸೆ, ತಾಲೂಕು ಉಪಾಧ್ಯಕ್ಷರಾದ ರಾಜು ಕೋಟ್ಯಾಳ, ಅಟೋ ಘಟಕದ ಜಿಲ್ಲಾಧ್ಯಕ್ಷ ಉಮೇಶ ರುದ್ರಮುನಿ, ಎಸ್ಟಿಎಸ್ಪಿ ಘಟಕ ಜಿಲ್ಲಾ ಮುಖಂಡರಾದ ಯಮನಪ್ಪ ಹಾದಿಮನಿ, ಮಹಿಳಾ ಘಟಕ ಜಿಲ್ಲಾಧ್ಯಕ್ಷರಾದ ವಾಣಿಶ್ರೀ ಪಟ್ಟಣಶೆಟ್ಟಿ, ತಾಲೂಕಾ ಅಧ್ಯಕ್ಷರಾದ ಸಿದ್ದಮ್ಮ ಹಿರೂರ, ಜಿಲ್ಲಾ ಉಪಾಧ್ಯಕ್ಷ ಸುಮಿತ್ರಾ ಪಟ್ಟಣಶೆಟ್ಟಿ, ಶಶಿಕಲಾ ಹಡಪದ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.