ಜಯ ಕರ್ನಾಟಕ ಸಂಘಟನೆಯಿಂದ ತಪ್ಪಿತಸ್ತ ಅಧಿಕಾರಿಗಳ ಮೇಲೆ ಕ್ರಮಕ್ಕೆ ಆಗ್ರಹ

Jaya Karnataka organization demands action against guilty officials

ಜಯ ಕರ್ನಾಟಕ ಸಂಘಟನೆಯಿಂದ ತಪ್ಪಿತಸ್ತ ಅಧಿಕಾರಿಗಳ ಮೇಲೆ ಕ್ರಮಕ್ಕೆ ಆಗ್ರಹ

ಶಿಗ್ಗಾವಿ 10 : ತಾಲ್ಲೂಕಿನ ವನಹಳ್ಳಿ ಗ್ರಾಮದ ಗ್ರಾಪಂ ಆವರಣದಲ್ಲಿ ಆರೋಹಣ ಮಾಡಿದ ರಾಷ್ಟ್ರಧ್ವಜವನ್ನು ಸಂಜೆ ಅವರೋಹಣ ಮಾಡದೇ ಇರುವವರ ಮೇಲೆ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಒತ್ತಾಯಿಸಿ ಜಯ ಕರ್ನಾಟಕ ಪದಾಧಿಕಾರಿಗಳು ಕಾರ್ಯನಿರ್ವಾಹಕರಿಗೆ ಮನವಿ ಸಲ್ಲಿಸಿದರು. ಸಂಘಟನೆಯ ತಾ.ಪಂ ಅಧಿಕಾರಿಗಳಿಗೆ ಏ. 1ರಂದು ವನಹಳ್ಳಿ ಗ್ರಾಪಂ ಆವರಣದಲ್ಲಿ ಆರೋಹಣ ಮಾಡಿದ ರಾಷ್ಟ್ರಧ್ವಜವನ್ನು ಅವರೋಹಣ ಮಾಡದೇ ಇರುವುದನ್ನು ನೋಡಿ, ದೂರವಾಣಿ ಮೂಲಕ ತಾಪಂ ಇಓ ಕುಮಾರ ಮಣ್ಣವಡ್ಡರ ಗಮನಕ್ಕೆ ತಂದರೂ, ಇಲ್ಲಿಯವರೆಗೆ ತಪ್ಪಿತಸ್ತ ಅಧಿಕಾರಿಗಳ ಮೇಲೆ ಯಾವುದೇ ಕ್ರಮ ಜರುಗಿಸದೇ ಇರುವುದು ರಾಷ್ಟ್ರಧ್ವಜಕ್ಕೆ ಮಾಡಿದ ಅವಮಾನವಾಗಿದೆ. ಕೂಡಲೇ ತಪ್ಪಿತಸ್ತ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಇಲ್ಲದೇ ಹೋದರೆ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ಮನವಿ ಮೂಲಕ ಎಚ್ಚರಿಸಿದ್ದಾರೆ.  ಜಯ ಕರ್ನಾಟಕ ಸಂಘಟನೆ ತಾಲ್ಲೂಕು ಘಟಕ ಅಧ್ಯಕ್ಷ ಹನುಮಂತಪ್ಪ ಬಂಡಿವಡ್ಡರ, ಯಲ್ಲಪ್ಪ ವಡ್ಡರ, ಗೋವಿಂದಪ್ಪ ವಾಲಿಕಾರ ಸೇರಿದಂತೆ ಇತರರು ಇದ್ದರು.