ಬೆಳಗಾವಿ : ಇಲ್ಲಿನ ಕೇಂದ್ರ ಬಸ್ ನಿಲ್ದಾಣದ ಬದಿಯಲ್ಲಿ ಹಣ್ಣು ಮಾರಾಟ ಮಾಡುತ್ತಿದ್ದ ಬೀದಿ ವ್ಯಾಪಾರಿಗಳನ್ನು ಸ್ಥಳಾಂತರ ಮಾಡಿರುವ ಕ್ರಮವನ್ನು ಖಂಡಿಸಿ ಜಯಕನರ್ಾಟಕ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದರು.
ಇಲ್ಲಿನ ಮಹಾನಗರ ಪಾಲಿಕೆಗೆ ಮಂಗಳವಾರ ಬೆಳಿಗ್ಗೆ ಆಗಮಿಸಿದ ಜಯಕನರ್ಾಟಕ ಸಂಘಟನೆ ಕಾರ್ಯಕರ್ತರು ಕೇಂದ್ರ ಬಸ್ ನಿಲ್ದಾಣದ ಬಳಿ ಬೀದಿಬದಿ ಹಣ್ಣು ಮಾರಾಟ ಮಾಡುತ್ತಿದ್ದ ವ್ಯಾಪಾರಿಗಳನ್ನು ಸ್ಥಳಾಂತರ ಮಾಡಿದ್ದನ್ನು ಖಂಡಿಸಿದರು. ಈ ಕುರಿತು ಮಹಾನಗರ ಪಾಲಿಕೆ ಆಯಕ್ತರಿಗೆ ಮನವಿ ನೀಡಿ, ಕಳೆದ ಹಲವಾರು ವರ್ಷಗಳಿಂದ ಬಿಸಿಲು ಮಳೆ ಲೆಕ್ಕಿಸದೆ ರಸ್ತೆ ಬದಿಯಲ್ಲಿ ಕುಳಿತುಕೊಂಡು ವ್ಯಾಪಾರ ಮಾಡುತ್ತಿದ್ದಾರೆ. ಕೂಡಲೇ ಈ ವ್ಯಾಪಾರಿಗಳಿಗೆ ಅದೇ ಸ್ಥಳದಲ್ಲಿಯೇ ವ್ಯಾಪಾರ ಮಾಡಲು ಅನುಮತಿ ನೀಡಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ ಮಾತನಾಡಿದ ಜಯ ಕನರ್ಾಟಕ ಸಂಘಟನೆಯ ಸಂಜಯ ರಜಪೂತ್ ಈ ರೀತಿಯಲ್ಲಿ ಬಡವರಿಗೆ ತೊಂದರೆ ನೀಡುವ ಕೆಲಸವನ್ನು ಮಾಡದಂತೆ ಮನವಿ ಮಾಡಿಕೊಂಡರು. ಅದೇ ವ್ಯಾಪಾರವನ್ನು ನಂಬಿಕೊಂಡು ಹಲವಾರು ಕುಟುಂಬಗಳು ಉಪಜೀವನ ಸಾಗಿಸುತ್ತಿವೆ. ಈ ಹಿನ್ನೆಲೆಯಲ್ಲಿ ಬೀದಿ ಬದಿಯ ಈ ವ್ಯಾಪಾರಿಗಳಿಗೆ ಅಲ್ಲಿಯೇ ವ್ಯಾಪಾರ ನಡೆಸಲು ಅನುವು ಮಾಡಿಕೊಂಡುವಂತೆ ಎಂದು ಆಗ್ರಹಿಸಿದರು.
ಇದೇ ವೇಳೆ ಸಂಘಟನೆ ಮತ್ತೋರ್ವ ಮುಖಂಡ ಯಲ್ಲೇಶ ಬಚ್ಚಲಪೂರಿ ಅವರು ಮಾತನಾಡಿ, ಕಳೆದ ಹಲವಾರು ವರ್ಷಗಳಿಂದ ಇದೇ ಸ್ಥಳದಲ್ಲಿ ವ್ಯಾಪಾರ ನಡೆಸುತ್ತಿರುವ ಬಡ ವ್ಯಾಪಾರಿಗಳ ಮೇಲೆ ಮಹಾನಗರದ ಪಾಲಿಕೆಯ ಅಧಿಕಾರಿಗಳು ದಬ್ಬಾಳಿಕೆ ನಡೆಸುತ್ತಿದ್ದಾರೆ. ಸ್ಮಾಟರ್್ಸಿಟಿ ಹೆಸರಿನಲ್ಲಿ ಬಡವರಿಗೆ ತೊಂದರೆ ಕೊಡುವುದು ಸರಿಯಲ್ಲ ಎಂದು ತಮ್ಮ ಅಸಮಾಧಾನ
ವ್ಯಕ್ತಪಡಿಸಿದರು.
ಇಂದಿನ ಪ್ರತಿಭಟನೆಯಲ್ಲಿ ನಜೀರ್ ಶೇಖ್, ಇಫರ್ಾನ್ ಅತ್ತಾರ, ಎಸ್.ಎಸ್.ತೇಲಗಿ, ಮೆಹಬೂಬ್ ದೇಸಾಯಿ, ಯುಸೂಫ್ ಸೇರಿದಂತೆ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.