ಮಹಾತ್ಮ ಗಾಂಧೀಜಿ ಶಾಸ್ತ್ರೀಜಿ ಗೆ ಜಯಂತಿ ಕಾರ್ಯಕ್ರಮ

ಬ್ಯಾಡಗಿ 03: ಸರಳ ಜೀವನ ಮತ್ತು ಅಹಿಂಸಾ ಮಾರ್ಗದ ಸತ್ಯಾಗ್ರಹದ ಮೂಲಕ ಮಹಾತ್ಮ ಗಾಂಧೀಜಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಅವರ ಆದರ್ಶ ವಿಶ್ವಕ್ಕೆ ಮಾದರಿಯಾಗಿದೆ ಎಂದು ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸವರಾಜ ಶಿವಣ್ಣನವರ  ಸ್ಮರಿಸಿದರು.ತಾಲೂಕು ಕಚೇರಿಯ ಆವರಣದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಅವರು ಪುಷ್ಪ ನಮನ ಸಲ್ಲಿಸುವ ಮೂಲಕ ಮಾತನಾಡಿದರು.ವಿಶ್ವ ಮನ್ನಣೆ ಗಳಿಸಿದ ಮಹಾನ್ ಪುರುಷ ಮಹಾತ್ಮ ಗಾಂಧೀಜಿ ಅವರ ಸ್ಮರಣೆ ಮತ್ತು ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುಂದುವರಿಯಬೇಕು ಎಂದರು.ಲಾಲ್‌ಬಹದ್ದೂರ್ ಶಾಸ್ತ್ರಿ ಸಹ ಪ್ರಧಾನ ಮಂತ್ರಿಯಾಗಿದ್ದರೂ ತಮ್ಮ ಸರಳ, ಸಜ್ಜನಿಕೆಯಿಂದ ಉದಾತ್ತ ಧ್ಯೇಯಗಳೊಂದಿಗೆ ದೇಶ ಎದುರಿಸುತ್ತಿದ್ದ ಕಡುಬಡತನ, ಆಹಾರ ಸಮಸ್ಯೆ ಹಾಗೂ ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ನೀಡಿದಂತಹ ಮಹಾನ್ ವ್ಯಕ್ತಿಯಾಗಿದ್ದರು ಎಂದು ಗುಣಗಾನ ಮಾಡಿದರು.  

ಇಂತಹ ಮಹಾನ್ ಪುರುಷರ ಜೀವನ ಚರಿತ್ರೆಯನ್ನು ಶಾಲಾ, ಕಾಲೇಜುಗಳ ಪಠ್ಯ ವಿಷಯಗಳನ್ನಾಗಿ ಅಳವಡಿಸಿರುವುದು ಗಮನಾರ್ಹವಾಗಿದೆ ಎಂದು ತಿಳಿಸಿದರು.ಇದೇ ವೇಳೆ ರಾಷ್ಟ್ರೀಯ ಹಬ್ಬಗಳ ಅಧ್ಯಕ್ಷ ಹಾಗೂ ತಾಲೂಕು ದಂಡಾಧಿಕಾರಿ ಫೀರೊಜ ಷಾ ಸೋಮನಕಟ್ಟಿ ಮಾತನಾಡಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಬ್ರಿಟಿಷ್ ದಬ್ಬಾಳಿಕೆಯಿಂದ ಅಹಿಂಸಾ ಮಾರ್ಗದ ಮೂಲಕ ಹೋರಾಟವನ್ನು ಮಾಡಿ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟುವರು ಎಲ್ಲಾ ಸ್ವತಂತ್ರ ಹೋರಾಟಗಾರರ ನಾಯಕರ ಅಧಿಕ ನಾಯಕ ನಾಗಿ ಗಾಂಧೀಜಿಯವರು ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರೂ ಅವರು ತೋರಿಸಿಕೊಟ್ಟ ಅಹಿಂಸಾತ್ಮಕ ಚಳುವಳಿಯ ಮೂಲಕ ದೇಶ ಮತ್ತು ದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ನಾವೆಲ್ಲರೂ ಕ್ಷಮಿಸಬೇಕಾಗಿದೆ ಎಂದು ಹೇಳಿದರು ಜೈ ಜವಾನ್ ಜೈ ಕಿಸಾನ್ ಘೋಷಣೆಯೊಂದಿಗೆ ದೇಶದ ಸರ್ವತೋಮುಖ ಅಭಿವೃದ್ಧಿಗೆ ಸದಾ ತಮ್ಮನ್ನು ಅರ​‍್ಿಸಿದ ದೇಶದ ಎರಡನೆಯ ಪ್ರಧಾನ ಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ ಕೊಂಡಾಡುವ ಸೌಭಾಗ್ಯ ನಮಗೆ ಸಾಧ್ಯವಾಗಿದೆ ಮುಂದಿನ ಪೀಳಿಗೆ ದೇಶದ ಮಹಾನ್ ವ್ಯಕ್ತಿಯರ ನೆನಪಿನಲ್ಲಿ ಈ ರೀತಿ ಕಾರ್ಯಕ್ರಮಗಳನ್ನು ನಿರಂತರ ಆಚರಿಸಬೇಕೆಂದು ಹೇಳಿದರು. 

 ಈ ಸಂದರ್ಭದಲ್ಲಿ ಗುರುಗಳಾದ ವೈಟಿ ಹೆಬ್ಬಳ್ಳಿ ಹಾಗೂ ಎಮ್ ಎಫ್ ಕರಿಯಣ್ಣವರ್  ಇವರುಗಳಿಂದ ಭಜನಾ ಕಾರ್ಯಕ್ರಮವನ್ನು ನಡೆಸಲಾಯಿತು.ಈ ಸಂದರ್ಭದಲ್ಲಿ ತಾಲೂಕು ಕಾರ್ಯಗಳು ಅಧಿಕಾರಿ ಕೆ ಮಲ್ಲಿಕಾರ್ಜುನ್ ಕ್ಷೇತ್ರ ಶಿಕ್ಷಣಾಧಿಕಾರಿ ಅಕ್ಷರ ದಾಸೋಹ ಅಧಿಕಾರಿ ಎಸ್ ತಿಮ್ಮಾರೆಡ್ಡಿ ಪುರಸಭೆ ಉಪಾಧ್ಯಕ್ಷ ಸುಭಾಷ್ ಮಾಳಗಿ ಪುರಸಭೆ ಮುಖ್ಯ ಅಧಿಕಾರಿ ವಿನಯ್ ಕುಮಾರ್ ಹೊಳೆಪ್ಪ ಗೋಳ. ಹಾಗೂ ಕಾಂಗ್ರೆಸ್ ಮುಖಂಡ ನಾಗರಾಜ್ ಆನ್ವೇರಿ ಹಾಗೂ ತಹಶೀಲ್ದಾರ್ ಕಚೇರಿ ಎಲ್ಲ ಸಿಬ್ಬಂದಿಗಳು ಉಪಸ್ಥಿತರಿದ್ದರು