ದಿ. 14ರಂದು ಜಯಸಿಂಹ ವಿಜಯಪುರಕ್ಕೆ ಆಗಮನ
Jayasimha arrives in Vijayapura on the 14th
ವಿಜಯಪುರ 13: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಶ್ರೀ ಅಸಗೋಡು ಜಯಸಿಂಹ ಅವರು ದಿ. 14. ರಂದು ವಿಜಯಪುರಕ್ಕೆ ಆಗಮಿಸಲಿದ್ದಾರೆ. ನಗರದ ಕಾಳಿಕಾದೇವಿ ದೇವಸ್ಥಾನದಲ್ಲಿ ಸಾಯಂಕಾಲ 4 ಗಂಟೆಗೆ ಸಮಾಜದ ಬಾಂಧವರೊಂದಿಗೆ ಸಭೆ ನಡೆಸಲಿದ್ದಾರೆ.
ಅರ್ಹ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಸ್ವಾವಲಂಬಿ ಯೋಜನೆ ಅಡಿಯಲ್ಲಿ ಬ್ರಾಹ್ಮಣ ಸಮಾಜಕ್ಕೆ ಸಹಾಯಧನ ಹಾಗೂ ಅಭಿವೃದ್ಧಿ ಮಂಡಳಿಯ ಅಡಿಯಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಲಭ್ಯವಾಗಿರುವ ಎಲ್ಲಾ ಯೋಜನೆಗಳ ವಿವರವನ್ನು ಅಧ್ಯಕ್ಷರು ವಿಪ್ರ ಸಮಾಜಕ್ಕೆ ಮನವರಿಕೆ ಮಾಡಿ ಕೊಡುವ ಯೋಜನೆ ಯೊಂದಿಗೆ ನಗರಕ್ಕೆ ಆಗಮಿಸುತ್ತಿದ್ದು ವಿಪ್ರ ಸಮುದಾಯದ ಎಲ್ಲ ಬಾಂಧವರು ಸಭೆಗೆ ಆಗಮಿಸಬೇಕಾಗಿ ವಿನಂತಿ.
ಕಾರ್ಯಕ್ರಮದ ಸಂಘಟಕರಾದ ಸತೀಶ್ಚಂದ್ರ ಕುಲಕರ್ಣಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಚುನಾಯಿತ ಜಿಲ್ಲಾ ಪ್ರತಿನಿಧಿ , ಹಾಗೂ ಆನಂದ ಜೋಶಿ, ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘ, ಹಾಗೂ ಬ್ರಾಹ್ಮಣ ಸಮಾಜದ ಮುಖಂಡರಾದ ಗೋಪಾಲ ನಾಯಕ, ರಾಘವೇಂದ್ರ ಅಲಗೂರ, ಕೃಷ್ಣಾಜಿ ಕುಲಕರ್ಣಿ,ಮಹೇಶ್ ದೇಶಪಾಂಡೆ, ಅರವಿಂದ ಜೋಶಿ ಹಾಗೂ ಪ್ರಕಾಶ ಅಕ್ಕಲಕೋಟ, ವಿಜಯಕುಮಾರ್ ಜೋಶಿ, ವಿಕಾಸ ಪದಕಿ ವಿನಂತಿಸಿಕೊಂಡಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 