ಪರಿಷತ್ ಸದಸ್ಯ ರವಿಕುಮಾರ್ ಹೇಳಿಕೆಗೆ ಜೇಬಾ ತಬಸುಮ್ ಖಂಡನೆ : ಕಾನೂನು ಕ್ರಮಕ್ಕೆ ಒತ್ತಾಯ
Jeba Tabasum Condemns Parishad Member Ravikumar's Statement: Demand Legal Action
ಕೊಪ್ಪಳ 07: ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ವಿಧಾನ ಪರಿಷತ್ನ ಬಿಜೆಪಿ ಸದಸ್ಯ ಎನ್. ರವಿಕುಮಾರ್ ನಾಲಿಗೆ ಹರಿಬಿಟ್ಟು ತನ್ನೊಳಗಿನ ಕೊಳಕು ಮನಸ್ಥಿತಿ ಹೊರಹಾಕಿದ್ದಾರೆ ಎಂದು ನೆಹರು ಕಾರ್ಯನಿರತ ಸಮಿತಿಯ ಅಲ್ಪಸಂಖ್ಯಾತರ ಘಟಕದ ರಾಷ್ಟ್ರೀಯ ಉಪಾಧ್ಯಕ್ಷರಾದ ಕಲಬುರ್ಗಿಯ ಜೇಬಾ ತಮಸ್ಸುಮ ಖಂಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮಹಿಳೆಯರ ಬಗ್ಗೆ ಕಿಂಚಿತ್ತೂ ಗೌರವ ಕೊಡದ ರವಿಕುಮಾರ್ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಿನ ಮಹಿಳೆಯರಲ್ಲಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ. ರಾಜ್ಯ ಬಿಜೆಪಿ ನಾಯಕರಿಂದ ಮಹಿಳೆಯರ ನಿಂದನೆ ನಿರಂತರ ವಾಗಿ ನಡೆಯುತ್ತಿದೆ. ಹಿರಿಯ ಮಹಿಳಾ ಐಎಎಸ್ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರವಿಕುಮಾರ್ ಅವರು ಇಡೀ ಮಹಿಳಾ ಕುಲಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ ಅವರು ಕೂಡಲೇ ಅವರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕೆಂದು ನೆಹರು ಕಾರ್ಯನಿರತ ಸಮಿತಿ ಅಲ್ಪಸಂಖ್ಯಾತರ ಘಟಕದ ರಾಷ್ಟ್ರೀಯ ಉಪಾಧ್ಯಕ್ಷರಾದ ಕಲಬುರ್ಗಿಯ ಜೇಬಾ ತಮಸ್ಸುಮ್ ಒತ್ತಾಯಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 