ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
Jewelry shop looted in the heart of Belagavi; police rush to the scene.
ಬೆಳಗಾವಿ : ನಗರದ ಹೃದಯಭಾಗದ ಚಿನ್ನಾಭರಣ ಅಂಗಡಿಯೊಂದರಲ್ಲಿ ಚಿನ್ನಾಭರಣ ಲೂಟಿ ಮಾಡಿರುವ ಘಟನೆಯೊಂದು ಖಡೇಬಜಾರ ಪೊಲೀಸ್ ಠಾಣೆ ವ್ಯಾಪ್ತಿಯ ಗಣಪತಿ ಗಲ್ಲಿಯಲ್ಲಿ ನಡೆದಿರುವದು ವರದಿಯಾಗಿದೆ.
ಲಭ್ಯ ಮಾಹಿತಿಯಂತೆ, ಮಧ್ಯರಾತ್ರಿ ವಾಹನದಲ್ಲಿ ಬಂದ ದುಷ್ಕರ್ಮಿಗಳು ಅಂಗಡಿಯ ಬೀಗ ಒಡೆಯಲು ಪ್ರಯತ್ನಿಸಿದ್ದಾರೆ. ಬಳಿಕ ಸುಮಾರು ಎರಡು ಗಂಟೆಗಳ ನಂತರ ಮತ್ತೊಂದು ವಾಹನದಲ್ಲಿ ಬಂದ ವ್ಯಕ್ತಿಯೊಬ್ಬ ಅಂಗಡಿಯೊಳಗಿನ ಕೆಲವು ವಸ್ತುಗಳನ್ನು ತೆಗೆದುಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಖಡೇಬಜಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಿಸಿಟಿವಿ ದೃಶ್ಯಾವಳಿ ಸೇರಿದಂತೆ ವಿವಿಧ ಸಾಕ್ಷ್ಯಗಳನ್ನು ಸಂಗ್ರಹಿಸಿ ತನಿಖೆ ಮುಂದುವರಿಸಿದ್ದಾರೆ. ಘಟನಾ ಸ್ಥಳಕ್ಕೆ ಶ್ವಾನ್ ದಳ ಹಾಗೂ ಬೆರಳಚ್ಚು ತಜ್ಞರ ತಂಡವನ್ನು ಕರೆತರಲಾಗಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ತನಿಖೆಯ ನಂತರವೇ ಸ್ಪಷ್ಟವಾಗಲಿದೆ.
.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 