ನವದೆಹಲಿ, ನ.15 : ಮುಂಬರುವ ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅಲ್ಲಿನ ಮಾಜಿ ಮುಖ್ಯಮಂತ್ರಿ ಮಧು ಕೋಡಾ ಅವರಿಗೆ ಸುಪ್ರೀಂ ಕೋರ್ಟ್ ಅನುಮತಿ ನಿರಾಕರಿಸಿದೆ.
ಅವರ ಅನರ್ಹತೆ ಇನ್ನೂ ಒಂದು ವರ್ಷ ಬಾಕಿ ಇರುವುದರಿಂದ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಿಲ್ಲ. ಅರ್ಜಿಯ ಸಂಬಂಧ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಕಳೆದ ವಿಧಾನಸಭಾ ಚುನಾವಣೆಯ ವೇಳೆ ಮಾಡಿದ್ದ ಖರ್ಚು ವೆಚ್ಚಗಳ ಬಗ್ಗೆ ಪ್ರಮಾಣಪತ್ರವನ್ನು ಸಮರ್ಪಕ ನಮೂನೆಯಲ್ಲಿ ಸಲ್ಲಿಸದ ಕಾರಣ 2017ರಲ್ಲಿ ಕೋಡಾ ಅವರ ಶಾಸಕತ್ವವನ್ನು ಅನರ್ಹಗೊಳಿಸಲಾಗಿತ್ತು.
ಪಕ್ಷೇತರ ಅಭ್ಯರ್ಥಿಯಾಗಿದ್ದ ಕೋಡಾ ಅವರು 2006ರಿಂದ 2008ರವರೆಗೆ ರಾಜ್ಯದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ.