ಸಿಬ್ಬಂದಿಗೆ ಪ್ರತಿನಿತ್ಯ ತಪಾಸಣೆ ನಡೆಸಲು ಜಿಂದಾಲ್ಗೆ ಡಿಸಿ ಸೂಚನೆ
ಬಳ್ಳಾರಿ,ಜೂ.09: ಜಿಂದಾಲ್ ಸಿಬ್ಬಂದಿಗೆ ಕೋರೊನಾ ಪಾಸಿಟಿವ್ ಸೊಂಕು ಪತ್ತೆಯಾದ ಹಿನ್ನೆಲೆಯಲ್ಲಿ ಜಿಂದಾಲ್ಗೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್,ಎಸ್ಪಿ ಸಿ.ಕೆ.ಬಾಬಾ ಮತ್ತು ಜಿಪಂ ಸಿಇಒ ಕೆ.ನಿತೀಶ್ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳ ನೇತೃತ್ವದ ತಂಡ ಎರಡು ದಿನಗಳ ಹಿಂದೆ ಭೇಟಿ ನೀಡಿ ಕೊರೊನಾ ಹರಡದಂತೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು.ಕೆಲ ಅಗತ್ಯ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಪ್ರತಿನಿತ್ಯ ಎಲ್ಲ ಸಿಬ್ಬಂದಿಗಳಿಗೆ ಕಡ್ಡಾಯವಾಗಿ ತಪಾಸಣೆ ನಡೆಸಬೇಕು. ಮಾಸ್ಕ್ ಕಡ್ಡಾಯ ಧರಿಸುವಿಕೆ, ಸಾಮಾಜಿಕ ಅಂತರ ಕಾಪಾಡುವಿಕೆ,ಸಿಬ್ಬಂದಿ ಕಡಿತ ಸೇರಿದಂತೆ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕು ಎಂದು ಅವರು ಸೂಚನೆ ನೀಡಿದರು.
ಜ್ವರ, ಕೆಮ್ಮು, ನೆಗಡಿ, ಶೀತದಂತ ಲಕ್ಷಣಗಳಿರುವ ಸಿಬ್ಬಂದಿಗಳ ಮತ್ತು ಗುತ್ತಿಗೆ ಕಾಮರ್ಿಕರ ಮೂಗು ಮತ್ತು ಗಂಟಲು ದ್ರವ್ಯವನ್ನು ಸಂಗ್ರಹಿಸಿ ವಿಮ್ಸ್ ವೈರಾಣು ಲ್ಯಾಬ್ಗೆ ಕಳುಹಿಸಬೇಕು.
ತೀವ್ರ ಉಸಿರಾಟದ ಸಮಸ್ಯೆ ಇರುವಂತರಿದ್ದಲ್ಲಿ ಅವರ ಸ್ವ್ಯಾಬ್ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿಕೊಡಬೇಕು ಮತ್ತು ಸಮಗ್ರ ವಿವರವಾದ ವರದಿಯನ್ನು ಜಿಲ್ಲಾಡಳಿತಕ್ಕೆ ಒಪ್ಪಿಸಬೇಕು ಎಂದರು.
ಜೆಎಸ್ಡಬ್ಲ್ಯೂ ಹಿರಿಯ ಉಪಾಧ್ಯಕ್ಷ(ಮಾನವ ಸಂಪನ್ಮೂಲ) ವಿಜಯ್ ಸಿನ್ಹಾ ಅವರು ಕೊರೊನಾ ಹರಡದಂತೆ ತಡೆಯುವ ನಿಟ್ಟಿನಲ್ಲಿ ಜಿಂದಾಲ್ ಸಂಸ್ಥೆಯಲ್ಲಿ ಇದುವರೆಗೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ವಿವರಣೆ ನೀಡಿದರು.
ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲಾಗುತ್ತಿದೆ ಮತ್ತು ಸಂಸ್ಥೆಯಲ್ಲಿನ ಉದ್ಯೋಗಿಗಳು, ಮತ್ತವರ ಕುಟುಂಬದ ಸದಸ್ಯರಿಗೆ ಸಹಾಯ ಮಾಡುವ ಸಲುವಾಗಿ 24*7 ಕೊರೊನಾ ಕಾರ್ನರ್ ಸಹಾಯವಾಣಿಯನ್ನು ಆರಂಭಿಸಲಾಗಿದ್ದು,ಕೋವಿಡ್ಗೆ ಸಂಬಂಧಿಸಿದ ಗೊಂದಲಗಳನ್ನು ಅಲ್ಲಿರುವ ಸ್ವಯಂಸೇವಕರು ಪರಿಹರಿಸಲಿದ್ದಾರೆ ಎಂದರು.
ಜಿಂದಾಲ್ ಉಪವ್ಯವಸ್ಥಾಪಕ ನಿದರ್ೇಶಕ ವಿನೋದ್ ನೋವೆಲ್ ಅವರು ಮಾತನಾಡಿ ಜಿಲ್ಲಾಡಳಿತದ ತಂಡ ಜಿಂದಾಲ್ನಲ್ಲಿ ಕೈಗೊಳ್ಳಲಾಗಿರುವ ಕ್ರಮಗಳನ್ನು ಪರಿಶೀಲಿಸಿದ್ದು,ಅನೇಕ ಸಲಹೆಗಳನ್ನು ತಿಳಿಸಿಕೊಟ್ಟಿದ್ದು ಸ್ವಾಗತಾರ್ಹ ಎಂದರು.
ಎಸ್ಪಿ ಸಿ.ಕೆ.ಬಾಬಾ ಅವರು ಮಾತನಾಡಿ, ಮುಂದಿನ ದಿನಗಳಲ್ಲಿ ನಾವೆಲ್ಲ ಕೊರೊನಾದೊಂದಿಗೆ ಬದುಕಬೇಕಾಗಿರುವ ಹಿನ್ನೆಲೆಯಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಂಡು ಬದುಕುವುದನ್ನು ಕಲಿಯಬೇಕಿದೆ ಎಂದರು. ಜಿಪಂ ಸಿಇಒ ಕೆ.ನಿತೀಶ್ ಮಾತನಾಡಿದರು.
ಈ ಸಂದರ್ಭದಲ್ಲಿ ಜೆಎಸ್ಡಬ್ಲ್ಯೂ ಸ್ಟೀಲ್ ಅಧ್ಯಕ್ಷ ಪಿ.ರಾಜಶೇಖರ,ಸಹಾಯಕ ಆಯುಕ್ತ ರಮೇಶ ಕೋನರೆಡ್ಡಿ, ತಹಸೀಲ್ದಾರ್ ರಶ್ಮೀ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಜನಾರ್ಧನ್,ಆರೋಗ್ಯ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಮತ್ತಿತರರು ಇದ್ದರು. ಮಂಜುನಾಥಪ್ರಭು ಅವರು ಸ್ವಾಗತಿಸಿ ವಂದಿಸಿದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 