ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ

ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ Jnan Gangotri's annual friendship conference reflected the value of quality education

             ಮೂಡಲಗಿ 13: “ಕಳೆದ ಹಲವು ವರ್ಷಗಳಿಂದ ಎಸ್‌.ಎಸ್‌.ಎಲ್‌.ಸಿ. ಪರೀಕ್ಷೆಯಲ್ಲಿ ಶೇಕಡಾ 100ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ ಜ್ಞಾನ ಗಂಗೋತ್ರಿಯ ಶಾಲೆಯ ಸಾಧನೆ ಶ್ಲಾಘನೀಯ. ಗ್ರಾಮೀಣ ಪ್ರದೇಶದ ಬಡ ಹಾಗೂ ಪ್ರತಿಭಾವಂತ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಈ ಸಂಸ್ಥೆಯ ಕೊಡುಗೆ ಅಪಾರವಾಗಿದೆ”ಎಂದು  ಮೂಡಲಗಿ ಬಿ.ಇ.ಒ. ಪ್ರಕಾಶ ಹಿರೇಮಠ ಹೇಳಿದರು.  ಅವರು ತಾಲೂಕಿನ ರಾಜಾಪೂರ ಗ್ರಾಮದ ಪ್ರತಿಷ್ಠಿತ ಜ್ಞಾನಗಂಗೋತ್ರಿ ಪ್ರೌಢಶಾಲೆಯಲ್ಲಿ 13ನೇ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಬಹುಮಾನ ವಿತರಣಾ ಸಮಾರಂಭ “ಸ್ಪಂಧನ” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ,  ಶಿಸ್ತು, ಉತ್ತಮ ಬೋಧನೆ ಹಾಗೂ ಸಮರ​‍್ಿತ ಆಡಳಿತವೇ ಈ ಸಾಧನೆಯ ಹಿನ್ನಲೆ ಎಂದು ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಾನಿಧ್ಯ ವಹಿಸಿದ್ದ ಕೃಪಾನಂದ ಸ್ವಾಮೀಜಿ ಮಾತನಾಡಿ, “ವಿದ್ಯೆ ಮಾತ್ರವಲ್ಲ, ಜೀವನದಲ್ಲಿ ಸಂಸ್ಕಾರ ಬಹಳ ಮುಖ್ಯ. ಆ ಸಂಸ್ಕಾರವನ್ನು ಪ್ರತಿಯೊಬ್ಬ ವಿದ್ಯಾರ್ಥಿಯೊಳಗೆ ತುಂಬುವ ಪವಿತ್ರ ಕಾರ್ಯವನ್ನು ಜ್ಞಾನಗಂಗೋತ್ರಿ ಸಂಸ್ಥೆ ನಿಷ್ಠೆಯಿಂದ ಮಾಡುತ್ತಿದೆ. ಇಂತಹ ಶಿಕ್ಷಣವೇ ಉತ್ತಮ ಸಮಾಜ ನಿರ್ಮಾಣಕ್ಕೆ ಮೂಲ”ಎಂದ ಅವರು ವಿದ್ಯಾರ್ಥಿಗಳ ಸವಾಂರ್ಗೀಣ ಬೆಳವಣಿಗೆಗೆ ಮೌಲ್ಯಾಧಾರಿತ ಶಿಕ್ಷಣ ಅಗತ್ಯವೆಂದರು. 

             ಗೋಕಾಕನ ಬಿಸಿಯೂಟ ಅಧಿಕಾರಿ ಅಶೋಕ ಮಲಬಣ್ಣವರ ಮಾತನಾಡಿ, “ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿರುವ ಜ್ಞಾನ ಗಂಗೋತ್ರಿ ಶಾಲೆಯಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಅತ್ಯುತ್ತಮ ಕೆಲಸ ಮಾಡುತ್ತಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯ ಜೊತೆಗೆ ಸಹಪಾಠ್ಯ ಚಟುವಟಿಕೆಗಳಿಗೆ ಸಮಾನ ಮಹತ್ವ ನೀಡುತ್ತಿರುವುದನ್ನು ಶ್ಲಾಘನೀಸಿದರು. ಕಾರ್ಯಕ್ರಮದ ಅಂಗವಾಗಿ ಶೈಕ್ಷಣಿಕ, ಕ್ರೀಡಾ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳ ಮನಮುಟ್ಟುವ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಕಲಾತ್ಮಕ ಪ್ರದರ್ಶನಗಳು ಸಮಾರಂಭಕ್ಕೆ ವಿಶೇಷ ಮೆರುಗು ನೀಡಿದವು. ಕಾರ್ಯಕ್ರಮದಲ್ಲಿ ಗ್ರಾಮದ ಗುರು-ಹಿರಿಯರು, ವಿದ್ಯಾಭಿಮಾನಿಗಳು, ಪಾಲಕ-ಪೋಷಕರು, ವಿದ್ಯಾರ್ಥಿಗಳು ಭಾರಿ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಎರಡು ದಿನ ನಡೆದ ಈ 13ನೇ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಬಹುಮಾನ ವಿತರಣಾ ಸಮಾರಂಭವು ಶೈಕ್ಷಣಿಕ ಸಾಧನೆ, ಸಂಸ್ಕಾರ ಮತ್ತು ಗುಣಾತ್ಮಕ ಶಿಕ್ಷಣದ ಪ್ರತೀಕವಾಗಿ ರೂಪುಗೊಂಡು ಪಾಲಕಹಿಪೋಷಕರ ಅಪಾರ ಮೆಚ್ಚುಗೆಗೆ ಪಾತ್ರವಾಯಿತು ಮತ್ತು ಅತ್ಯಂತ ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿಂದ ಜರುಗಿತು. ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದೊಂದಿಗೆ ನಿರಂತರವಾಗಿ ಶ್ರಮಿಸುತ್ತಿರುವ ಈ ಸಂಸ್ಥೆಯ ಶೈಕ್ಷಣಿಕ ಸಾಧನೆ ಮತ್ತು ಸಾಂಸ್ಕೃತಿಕ ವೈಭವಕ್ಕೆ ಈ ಕಾರ್ಯಕ್ರಮ ಸಾಕ್ಷಿಯಾಯಿತು.