ರಾಮಪುರದ ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆಯ ಜ್ಞಾನದೀಪೋತ್ಸವ
Jnandeepotsavam of Jnanodaya English Medium School, Rampur
ರಬಕವಿ-ಬನಹಟ್ಟಿ 21: ರಾಮಪುರದ ಜ್ಞಾನೋದಯ ಶಿಕ್ಷಣ ಸಂಸ್ಥೆಯ ಜ್ಞಾನೋದಯ ಆಂಗ್ಲ ಮಾಧ್ಯಮ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಜ್ಞಾನದೀಪ ಶಾಲೆಯ ವಾರ್ಷಿಕೋತ್ಸವ ಸಮಾರಂಭ ಜ್ಞಾನದೀಪೋತ್ಸವ ಮಂಗಳವಾರ ದಿ. 23 ರಂದು ನಡೆಯಲಿದೆ ಎಂದು ಸಂಸ್ಥೆಯ ಚೇರಮನ್ ಪರಾ್ಪ ಮಹಾದೇವಪ್ಪಾ ಬಿಳ್ಳೂರ ಹೇಳಿದರು.
ಅಂದು ಮುಂಜಾನೆ 9-30ಕ್ಕೆ ವಾರ್ಷಿಕೋತ್ಸವ ನಿಮಿತ್ತ ನಡೆದ ಅನೇಕ ಕ್ರೀಡೆಗಳಲ್ಲಿ ಮತ್ತು ಸಾಧಕ ವಿಧ್ಯಾರ್ಥಿಗಳಿಗೆ ಪಾರಿತೋಷಕ ವಿತರಣೆ ಸಮಾರಂಭ ಜರುಗಲಿದ್ದು, ಈ ಸಮಾರಂಭದ ಸಾನಿಧ್ಯವನ್ನು ಅಲ್ಲಮ್ಮಪ್ರಭು ವಿರಕ್ತಮಠ ಚಿಮ್ಮಡದ ಪ್ರಭು ಮಹಾಸ್ವಾಮಿಗಳು ವಹಿಸಲಿದ್ದು, ಅಧ್ಯಕ್ಷತೆಯನ್ನು ಪರಾ್ಪ ಮಹಾದೇವಪ್ಪ ಬಿಳ್ಳೂರ ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ
ಮುಖ್ಯ ಅತಿಥಿಗಳಾಗಿ ಶಾಸಕ ಸಿದ್ದು ಸವದಿ, ಡಾ. ಕಲ್ಲಪ್ಪಾ ಕುಂಚನೂರ, ಕ್ಷೇತ್ರ ಸಮನ್ವಯಾಧಿಕಾರಿ ಕೆ.ಎಂ. ಕೋಲೂರ, ಶಿಕ್ಷಣ ಸಂಯೋಜಕ ಡಬ್ಲೂ, ವಾಯ್. ಭಜಂತ್ರಿ, ಸಮೂಹ ಸಂಪನ್ಮೂಲ ವ್ಯಕ್ತಿ ಎಸ್.ಎಸ್.ಬಡ್ಡಿ ಆಗಮಿಸಲಿದ್ದಾರೆ.
ಸಾಂಸ್ಕೃತಿಕ ಸಮಾರಂಭ ಸಂಜೆ 5 ಕ್ಕೆ ಜರುಗಲಿದ್ದು, ಅಧ್ಯಕ್ಷತೆಯನ್ನು ಪರಾ್ಪ ಮಹಾದೇವಪ್ಪಾ ಬಿಳ್ಳೂರ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಏಕನಾಥ ಗಥಡೆ, ಮುಖ್ಯಗುರುಗಳಾದ ಕೃಷ್ಣಾ ತಳವಾರ, ಸಾಬು ಬುಗಟಿ, ಮಲ್ಲಿಕಾರ್ಜುನ ಮನ್ಮಿ ಸೇರಿದಂತೆ ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 