ಜಾಬ್ ಕಾರ್ಡ್ ಮೇಳ: ಗ್ರಾಮೀಣರಿಗೆ ಉದ್ಯೋಗಾವಕಾಶದ ಸದುಪಯೋಗ ಪಡೆಯಲು ಕರೆ
Job Card Mela: Call to rural residents to avail employment opportunities.
ಲೋಕದರ್ಶನ ವರದಿ
ಬಳ್ಳಾರಿ, ಆ.೨೪: ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್ಗಾರ್ ಆಜೀವಿಕಾ ಮಿಷನ್’ ಯೋಜನೆಯಡಿ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ ೧೫ರವರೆಗೆ ತಿಂಗಳ ಕಾಲ ‘ಜಾಬ್ ಕಾರ್ಡ್ ಮೇಳ’ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೊಹಮ್ಮದ್ ಹಾರಿಸ್ ಸುಮೇರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಗ್ರಾಮೀಣ ಜನರಿಗೆ ಸ್ಥಳೀಯ ಮಟ್ಟದಲ್ಲಿಯೇ ಉದ್ಯೋಗ ಕಲ್ಪಿಸುವ ಹಾಗೂ ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ಅವರು ತಿಳಿಸಿದ್ದಾರೆ.
‘ಪ್ರತಿ ಮನೆಗೆ ಭೇಟಿ-ಪ್ರತಿ ಕುಟುಂಬಕ್ಕೆ ಉದ್ಯೋಗ ಭದ್ರತೆ’ ಎಂಬ ಧ್ಯೇಯವಾಕ್ಯದೊಂದಿಗೆ ಅಧಿಕಾರಿಗಳು ಮನೆ-ಮನೆಗೆ ಭೇಟಿ ನೀಡಿ ನೋಂದಣಿ ಕಾರ್ಯ ಕೈಗೊಳ್ಳುವುದರ ಜೊತೆಗೆ ಗ್ರಾಮೀಣ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.
ಅಭಿಯಾನದ ಸೌಲಭ್ಯಗಳು
• ಉದ್ಯೋಗಾವಕಾಶ: ಪ್ರತಿ ಕುಟುಂಬಕ್ಕೆ ವರ್ಷದಲ್ಲಿ ೧೨೫ ದಿನಗಳ ಉದ್ಯೋಗ ಖಾತರಿ.
• ದೈನಂದಿನ ಕೂಲಿ: ದಿನಕ್ಕೆ ರೂ.೩೮೨ ನಿಗದಿತ ಕೂಲಿ ನೀಡಲಾಗುವುದು.
• ಜೀವನೋಪಾಯ ರಕ್ಷಣೆ: ಸ್ಥಳೀಯವಾಗಿಯೇ ಅಕುಶಲ ಕೆಲಸ ಒದಗಿಸುವ ಮೂಲಕ ನಗರಗಳಿಗೆ ವಲಸೆ ಹೋಗುವುದನ್ನು ನಿಯಂತ್ರಿಸುವ ಉದ್ದೇಶ ಹೊಂದಿದೆ.
ಕೈಗೆತ್ತಿಕೊಳ್ಳಲಾಗುವ ಕಾಮಗಾರಿಗಳು
ಬರ ಹಾಗೂ ಜಲ ಸಂರಕ್ಷಣೆ: ಕೃಷಿ ಹೊಂಡ, ತೆರೆದ ಬಾವಿ ನಿರ್ಮಾಣ, ಕೊಳವೆಬಾವಿ ಮರುಪೂರಣ ಘಟಕಗಳು ಹಾಗೂ ನಾಲಾಗಳಿಗೆ ತಡೆಗೋಡೆ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು.
ವೈಯಕ್ತಿಕ ಜೀವನೋಪಾಯ: ಫಲಾನುಭವಿಗಳ ಜಮೀನಿನಲ್ಲಿ ದನದ ಕೊಟ್ಟಿಗೆ, ಕುರಿ ಹಾಗೂ ಮೇಕೆ ಶೆಡ್ಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು.
ಗ್ರಾಮೀಣ ಭಾಗದ ಅರ್ಹ ಫಲಾನುಭವಿಗಳು ಈ ಅಭಿಯಾನದ ಸದುಪಯೋಗ ಪಡೆದುಕೊಂಡು ಹೊಸ ಜಾಬ್ ಕಾರ್ಡ್ ಪಡೆಯಬೇಕು. ಹೆಚ್ಚಿನ ಮಾಹಿತಿಗಾಗಿ ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಕಚೇರಿಯನ್ನು ಸಂಪರ್ಕಿಸುವAತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೊಹಮ್ಮದ್ ಹಾರಿಸ್ ಸುಮೇರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 