ರಾಯಬಾಗ ತಾಲೂಕಿನಲ್ಲಿ ಜಾಬ್ ಕಾರ್ಡ್‌ ಮೇಳ

ರಾಯಬಾಗ ತಾಲೂಕಿನಲ್ಲಿ ಜಾಬ್ ಕಾರ್ಡ್‌ ಮೇಳ  Job Card Mela in Raaybag Taluk

ರಾಯಬಾಗ  21: ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಆ.15ರಿಂದ ಸೆ.15ರವರೆಗೆ ಜಾಬ್ ಕಾರ್ಡ್‌ ಮೇಳ ಹಮ್ಮಿಕೊಳ್ಳಲಾಗಿದ್ದು, ಅರ್ಹ ಕೂಲಿಕಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾ.ಪಂ. ಇಒ ಅರುಣ ಮಾಚಕನ್ನವರ ಹೇಳಿದರು.  

ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶುಕ್ರವಾರ ನಡೆದ ಜಾಬ್ ಕಾರ್ಡ್‌ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಆ್ಯಂಡ್ ಆಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ ಮೇಳ ಆಯೋಜಿಸಲಾಗಿದ್ದು, ಅರ್ಹ ಗ್ರಾಮೀಣ ಕೂಲಿಕಾರರಿಗೆ ಹೊಸ ಜಾಬ್ ಕಾರ್ಡ್‌ ವಿತರಿಸಲಾಗುತ್ತಿದೆ. ಸಕ್ರಿಯವಲ್ಲದ ಕೂಲಿಕಾರರನ್ನು ಮತ್ತೆ ಸಕ್ರಿಯಗೊಳಿಸಲಾಗುತ್ತಿದೆ ಎಂದರು.  

ಎಲ್ಲ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕೆಲಸ ಒದಗಿಸಲಾಗುತ್ತಿದ್ದು, ದಿನಕ್ಕೆ ?382 ಕೂಲಿ ನೀಡಲಾಗುತ್ತಿದೆ. ಸಮಾನ ಕೆಲಸಕ್ಕೆ ಸಮಾನ ವೇತನದಡಿ ಗರಿಷ್ಠ 125 ದಿನಗಳವರೆಗೆ ಉದ್ಯೋಗ ಕಲ್ಪಿಸಲಾಗುವುದು.

ಆದ್ದರಿಂದ ಅರ್ಹ ಕೂಲಿಕಾರರು ಮೇಳದಲ್ಲಿ ಭಾಗವಹಿಸಿ ಉದ್ಯೋಗದ ಪ್ರಯೋಜನ ಪಡೆಯಬೇಕು. ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಗ್ರಾಮ ಪಂಚಾಯಿತಿಯನ್ನು ಸಂಪರ್ಕಿಸುವಂತೆ ಅವರು ತಿಳಿಸಿದರು. ಐಇಸಿ ಸಂಯೋಜಕ ಮುತ್ತುರಾಜ ಗದಾಡಿ, ಅಶೋಕ ಯಳಗುಡೆ ಹಾಗೂ ಇತರರು ಇದ್ದರು.