ರೋಣ ತಾಲೂಕಿನಲ್ಲಿ ಆಗಸ್ಟ್ 15ರಿಂದ ಸೆ.15ರವರೆಗೆ ಜಾಬ್ಕಾರ್ಡ್ ಮೇಳ
Job Card Mela in Rona Taluk from August 15 to September 15
ಲೋಕದರ್ಶನ ವರದಿ
ರೋಣ 15: ಗ್ರಾಮೀಣ ಪ್ರದೇಶದ ಅರ್ಹ ಕುಟುಂಬಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ರೋಣ ತಾಲೂಕು ಪಂಚಾಯಿತಿ ವ್ಯಾಪ್ತಿಯ 22 ಗ್ರಾಮ ಪಂಚಾಯಿತಿಗಳಲ್ಲಿ ಆಗಸ್ಟ್ 15ರಿಂದ ಸೆಪ್ಟೆಂಬರ್ 15ರವರೆಗೆ ಗಿಃಉ-ಖಂಒ-ಉ ಜಾಬ್ಕಾರ್ಡ್ ಮೇಳ ಆಯೋಜಿಸಲಾಗಿದೆ.
ಮೇಳದ ಅಂಗವಾಗಿ ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಾಬ್ಕಾರ್ಡ್ ಮೇಳದ ಬ್ರೋಷರ್ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, ಜಾಬ್ಕಾರ್ಡ್ ಗ್ರಾಮೀಣ ಕುಟುಂಬಗಳಿಗೆ ಉದ್ಯೋಗ ಖಾತರಿ ಸೌಲಭ್ಯ ಪಡೆಯಲು ಪ್ರಮುಖ ದಾಖಲೆಯಾಗಿದ್ದು, ಅರ್ಹ ಯಾವುದೇ ಕುಟುಂಬವೂ ಸೌಲಭ್ಯದಿಂದ ವಂಚಿತವಾಗದಂತೆ ವಿಶೇಷ ಗಮನ ಹರಿಸಬೇಕು ಎಂದು ಸಿಬ್ಬಂದಿಗೆ ಸೂಚಿಸಿದರು.
ಅಧಿಕಾರಿಗಳು ಹಾಗೂ ಸಿಬ್ಬಂದಿ ಮನೆ-ಮನೆಗೆ ಭೇಟಿ ನೀಡಿ ಜಾಬ್ಕಾರ್ಡ್ ಹೊಂದಿರದ ಅರ್ಹ ಕುಟುಂಬಗಳನ್ನು ಗುರುತಿಸಿ, ಯೋಜನೆಯ ಕುರಿತು ಮಾಹಿತಿ ನೀಡಬೇಕು. ಅಗತ್ಯವಿರುವ ಕುಟುಂಬಗಳಿಂದ ಅರ್ಜಿ ಹಾಗೂ ದಾಖಲೆಗಳನ್ನು ಪಡೆದು ಜಾಬ್ಕಾರ್ಡ್ ನೋಂದಣಿ ಪ್ರಕ್ರಿಯೆ ಕೈಗೊಳ್ಳಬೇಕು. ಈಗಾಗಲೇ ಜಾಬ್ಕಾರ್ಡ್ ಹೊಂದಿರುವ ಕುಟುಂಬಗಳಿಗೂ ಯೋಜನೆಯಡಿ ಲಭ್ಯವಿರುವ ಉದ್ಯೋಗಾವಕಾಶಗಳ ಕುರಿತು ಮಾಹಿತಿ ನೀಡುವಂತೆ ಸೂಚಿಸಲಾಯಿತು.
ಗ್ರಾಮಸ್ಥರು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗದಂತೆ ಸಿಬ್ಬಂದಿಯೇ ಗ್ರಾಮಗಳಿಗೆ ತೆರಳಿ ಮಾಹಿತಿ ಹಾಗೂ ಮಾರ್ಗದರ್ಶನ ನೀಡಬೇಕು ಎಂದು ಅಧಿಕಾರಿಗಳು ತಿಳಿಸಿದರು. ಅರ್ಹ ಕುಟುಂಬಗಳಿಗೆ ಉದ್ಯೋಗ ಒದಗಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿರುವುದರಿಂದ, ಯಾವುದೇ ಅರ್ಹ ಕುಟುಂಬ ಸೌಲಭ್ಯದಿಂದ ವಂಚಿತವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಮೇಳದ ಅವಧಿಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವ್ಯಾಪಕ ಪ್ರಚಾರ ಕೈಗೊಂಡು ಹೆಚ್ಚಿನ ಸಂಖ್ಯೆಯ ಅರ್ಹ ಕುಟುಂಬಗಳನ್ನು ಗುರುತಿಸುವಂತೆ ಅಧಿಕಾರಿಗಳು ತಿಳಿಸಿದರು. ಗಿಃಉ-ಖಂಒ-ಉ, ಗ್ರಾಮ ಪಂಚಾಯಿತಿ ಹಾಗೂ ಓಖಐಒ ಸಿಬ್ಬಂದಿ ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ ಗ್ರಾಮೀಣ ಜನರಿಗೆ ಯೋಜನೆಯ ಮಾಹಿತಿ ತಲುಪಿಸಬೇಕು ಎಂದು ಸೂಚಿಸಲಾಯಿತು.
ವಿಶೇಷವಾಗಿ ಉದ್ಯೋಗದ ಅಗತ್ಯವಿರುವ ಕುಟುಂಬಗಳನ್ನು ಗುರುತಿಸಿ ಅವರಿಗೆ ಅಗತ್ಯ ಮಾರ್ಗದರ್ಶನ ನೀಡುವಂತೆ ಅಧಿಕಾರಿಗಳು ಸೂಚಿಸಿದರು. ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ಹೊರಗೆ ತೆರಳುವ ಪರಿಸ್ಥಿತಿಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸ್ಥಳೀಯವಾಗಿ ಲಭ್ಯವಿರುವ ಉದ್ಯೋಗಾವಕಾಶಗಳ ಕುರಿತು ಮಾಹಿತಿ ನೀಡುವುದು ಮೇಳದ ಪ್ರಮುಖ ಉದ್ದೇಶವಾಗಿದೆ.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯಿತಿ ಸಿಬ್ಬಂದಿ, ಗಿಃಉ-ಖಂಒ-ಉ ಸಿಬ್ಬಂದಿ, ಓಖಐಒ ಸಿಬ್ಬಂದಿ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 