ಉದ್ಯೋಗ ಮೇಳ: ಜಿಲ್ಲಾಧಿಕಾರಿಗಳಿಂದ ವೆಬ್ಸೈಟ್ ಅನಾವರಣ

ಕೊಪ್ಪಳ 27: ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್ ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆ ವತಿಯಿಂದ ಕೊಪ್ಪಳದಲ್ಲಿ ''ಜಿಲ್ಲಾ ಮಟ್ಟದ ಉದ್ಯೋಗ ಮೇಳ-2020'' ಅನ್ನು ಆಯೋಜಿಸಲು ಉದ್ದೇಶಿದ್ದು, ಇದರ ಅಂಗವಾಗಿ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ತಮ್ಮ ಕಚೇರಿಯಲ್ಲಿ ಇಂದು(ಫೆ.27) ಅಧಿಕೃತ ವೆಬ್ಸೈಟ್ ಅನಾವರಣಗೊಳಿಸಿದರು.  ಉದ್ಯೋಗ ಮೇಳಕ್ಕೆ ಆಸಕ್ತಿವುಳ್ಳ ಕೊಪ್ಪಳ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳು ವೆಬ್ಸೈಟ್ ಣಣಠಿ://ಞಠಠಿಠಿಚಿಟ.ಟಿಛಿ.ಟಿ/ ನಲ್ಲಿ ನೋಂದಣಿ ಮಾಡಿಕೊಳ್ಳಬಹುದು.  ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ, ಎನ್.ಐ.ಸಿ ಅಧಿಕಾರಿಗಳಾದ ಈರಣ್ಣ ಏಳುಭಾವಿ, ಬಸವರಾಜ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಅಧಿಕಾರಿ, ಅಭಿಯಾನ ವ್ಯವಸ್ಥಾಪಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.