ಮೃತಪಟ್ಟ ಉದ್ಯೋಗಾಕಾಂಕ್ಷಿ ಮಾರುತಿ ಗೆ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ಶ್ರದ್ಧಾಂಜಲಿ
Job Seekers Struggle Committee pays tribute to deceased job seeker Maruti
ಧಾರವಾಡ 04 : ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿ ನಡೆಸುತ್ತಿದ್ದ ಸುರಪುರದ ಉದ್ಯೋಗಾಕಾಂಕ್ಷಿ ಮಾರುತಿ ನಿನ್ನೆ ಹೃದಯಘಾತದಿಂದ ಅಕಾಲಿಕವಾಗಿ ಮೃತಪಟ್ಟಿದ್ದು, ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ಮಿಚಗಿನ ಕಾಂಪೌಂಡ್ ಪಾರ್ಕ್ ನಲ್ಲಿ ಇಂದು ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮಾರುತಿ ಅವರ ಭಾವಚಿತ್ರಕ್ಕೆ ಎಲ್ಲ ಉದ್ಯೋಗಾಕಾಂಕ್ಷಿಗಳು ಪುಷ್ಪ ನಮನ ಸಲ್ಲಿಸಿದರು.ಈ ಸಂಧರ್ಭದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯ ರಾಜ್ಯ ಸಹ ಸಂಚಾಲಕರಾದ ಭವಾನಿಶಂಕರ್ ಎಸ್ ಗೌಡ ಮಾತನಾಡಿ, ಹಲವು ವರ್ಷಗಳಿಂದ ಧಾರವಾಡದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೋಸ್ಕರ ತಯಾರಿ ನಡೆಸುತ್ತಿದ್ದ ಮಾರುತಿ(ಮರೆಪ್ಪ) ಅವರು ಹೃದಯಾಘಾತದಿಂದ ಅಕಾಲಿಕವಾಗಿ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಅವರಿಗೆ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯು ಭಾವಪೂರ್ಣ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತದೆ. ಇವರಂತೆಯೇ ರಾಜ್ಯದಲ್ಲಿ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳು ಮನೆ-ಊರು ಬಿಟ್ಟು ಸಾಲ ಮಾಡಿಯೋ, ಹೊಟ್ಟೆ ಕಟ್ಟಿಯೋ ಧಾರವಾಡದಲ್ಲಿ ಪ್ರತಿದಿನ ಕಷ್ಟಪಟ್ಟು ಓದುತ್ತಿದ್ದಾರೆ. ಅದರೆ ರಾಜ್ಯಸರ್ಕಾರ ಕಳೆದ ಮೂರು ವರ್ಷಗಳಿಂದ ಕೇವಲ ಭರವಸೆಗಳನ್ನು ನೀಡುತ್ತಾ ಬಂದಿದೆಯೇ ಹೊರತು ಯಾವುದೇ ನೇಮಕಾತಿಗಳನ್ನು ಮಾಡಿಲ್ಲ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 