ಉದ್ಯೋಗ ಮೇಳ: ಪ್ರಚಾರ ಸಾಮಗ್ರಿ ವಿತರಣೆ

ಬಾಗಲಕೋಟೆ: ವಿದ್ಯಾಗಿರಿಯ ಗೌರಿಶಂಕರ ಕಲ್ಯಾಣ ಮಂಟಪದಲ್ಲಿ ಇದೇ ಫೆಬ್ರವರಿ 27 ಮತ್ತು 28 ರಂದು ನಡೆಯಲಿರುವ ಜಿಲ್ಲಾ ಮಟ್ಟದ ಉದ್ಯೋಗ ಮೇಳದ ಪ್ರಚಾರಕ್ಕಾಗಿ ನಗರ ಸ್ಥಳೀಯ ಸಂಸ್ಥೆಗಳಿಗೆ ಪ್ರಚಾರ ಸಾಮಗ್ರಿಗಳನ್ನು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಹಿರೇಮಠ ಸೋಮವಾರ ವಿತರಿಸಿದರು.

ಉದ್ಯೋಗ ಮೇಳದ ಕುರಿತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಪ್ರಮುಖ ಸ್ಥಳಗಳಲ್ಲಿ  ಪ್ರಚಾರ ಸಾಮಗ್ರಿಗಳನ್ನು ಅಳವಡಿಸುವ ಮೂಲಕ ಹೆಚ್ಚಿನ ಸಂಖ್ಯೆಯ ಉದ್ಯೋಗಾಕಾಂಕ್ಷಿಗಳು ತಮ್ಮ ವಿದ್ಯಾರ್ಹತೆಗೆ ಅನುಗುಣವಾಗಿ ವೆಬ್ಸೈಟ್ ತಿತಿತಿ.ಛಚಿರಚಿಟಞಠಣಜಣಜಥಿಠರಟಜಟಚಿ.ಛಿಠಟ ನಲ್ಲಿ ಫೆಬ್ರವರಿ 25 ರೊಳಗಾಗಿ ನೊಂದಣಿಯಾಗುವಂತೆ ಮಾಡಬೇಕು ಎಂದು ತಿಳಿಸಿದರು.

  ಈ ಮೇಳದಲ್ಲಿ 50ಕ್ಕೂ ಹೆಚ್ಚು ವಿವಿಧ ಕಂಪನಿಗಳು ಭಾಗವಹಿಸಲಿದ್ದು, ಅಂದಾಜು 3 ಸಾವಿರಕ್ಕಿಂತಲೂ ಹೆಚ್ಚು ಹುದ್ದೆಗಳನ್ನು ಭತರ್ಿ ಮಾಡಿಕೊಳ್ಳಲಿದ್ದಾರೆಂದು ತಿಳಿಸಿದರು.