ಉದ್ಯೋಗ ಮೇಳಕ್ಕೆ ಗಣ್ಯರಿಂದ ಚಾಲನೆ
Job fair inaugurated by dignitaries
ರಾಯಬಾಗ, 03 : ಗ್ರಾಮೀಣ ಭಾಗದಲ್ಲಿ ನಡೆಯುವ ಉದ್ಯೋಗ ಮೇಳದ ಸದುಪಯೋಗವನ್ನು ಗ್ರಾಮೀಣ ವಿದ್ಯಾರ್ಥಿಗಳು, ಯುವಕರು ಪಡೆದುಕೊಳ್ಳಬೇಕೆಂದು ಹುಬ್ಬಳ್ಳಿಯ ದೇಶಪಾಂಡೆ ಫೌಂಡೇಶನ ಸಂಸ್ಥೆಯ ಯಶಿತಾ ಹೇಳಿದರು. ಮಂಗಳವಾರ ಪಟ್ಟಣದ ಕೆ.ಎಲ್.ಇ ಸಂಸ್ಥೆಯ ಮಲಗೌಡ ಪಾಟೀಲ್ ವಾಣಿಜ್ಯ ಮಹಾವಿದ್ಯಾಲಯದಲ್ಲಿ ದೇಶಪಾಂಡೆ ಫೌಂಡೇಶನ್ ಹುಬ್ಬಳ್ಳಿ ಹಾಗೂ ಐಕ್ಯೂ ಎಸಿ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದೇಶಪಾಂಡೆ ಸ್ಕಿಲ್ಲಿಂಗ್ ವತಿಯಿಂದ ಯುವಕರಿಗೆ ವಿವಿಧ ಕೌಶಲ್ಯ ತರಬೇತಿಯನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
ಈ ಉದ್ಯೋಗ ಮೇಳದಲ್ಲಿ ಭಾರತೀಯ ಬ್ಯಾಂಕೇತರ ಪ್ರತಿಷ್ಠಿತ ಕಂಪನಿಯಾದ ಕ್ರೇಜಿಬಿ ಕಂಪನಿಯು ವಿವಿಧ ಪದವಿ ಅರ್ಹತೆ ಹೊಂದಿರುವ ವಿದ್ಯಾರ್ಥಿಗಳಿಗೆ ಟೆಲಿಸೆಲ್ಸ್ ಮತ್ತು ಕಲೆಕ್ಷನ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಸಂದರ್ಶನ ನಡೆಸಿತು. ಉದ್ಯೋಗ ಮೇಳದಲ್ಲಿ ಬೆಳಗಾವಿ ಮತ್ತು ಬಾಗಲಕೋಟ ಜಿಲ್ಲೆಯ ವಿವಿಧ ಮಹಾವಿದ್ಯಾಲಯ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಡಾ. ಆರ್.ಕೆ. ಪಾಟೀಲ್ ವಹಿಸಿದ್ದರು. ಅತಿಥಿಗಳಾಗಿ ದೇಶಪಾಂಡೆ ಫೌಂಡೇಶನ್ ಸಂಸ್ಥೆಯ ಆಶಾ ಹನ್ನಾ, ಸುನಿಲ್ ಕಮ್ಮಾರ, ರಾಘವೇಂದ್ರ ಪವಾರ, ಪ್ರೊ. ಆನಂದ ಉಮದಿ, ಪ್ರೊ. ಎಂ.ಎಸ್.ಹಂಜೆ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ನಿಕಿತಾ ಹಿರೇಮಠ ನಿರೂಪಿಸಿದರು, ಚೈತ್ರಾ ಚೌಗಲೆ ವಂದಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 