ಬೆಳಗಾವಿ ಡಿ.17: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಇವರ ವತಿಯಿಂದ ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಯಾವುದೇ ಪದವಿ ಅಭ್ಯರ್ಥಿಗಳಿಗಾಗಿ ನೆಹರು ನಗರದಲ್ಲಿ ಡಿಸೆಂಬರ್. 21 ರಂದು ಬೆಳಗ್ಗೆ 9.30 ರಿಂದ ಮದ್ಯಾಹ್ನ 2.30 ಗಂಟೆ ವರೆಗೆ ಖಾಸಗಿ ಕಂಪನಿಗಳಿಂದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್ https://forms.gle/tbQAyruk34Zrj4Yw9 ಮೂಲಕ ಹೆಸರನ್ನು ನೋಂದಾಯಿಸಬಹುದು, ಉದ್ಯೋಗಾವಕಾಶವು ಉಚಿತವಾಗಿದ್ದು, ಇನ್ನುಳಿದ ಯಾವುದೇ ಸೌಲಭ್ಯಗಳು ಇರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್. 7975856566 ಅಥವಾ 8217255504 ಸಂಖ್ಯೆಗಳಿಗೆ ಕಛೇರಿ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.