ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಉದ್ಯೋಗ ಮೇಳ ಕಾರ್ಯಕ್ರಮ
Job fair program at Akkamahadevi Women's University
ಲೋಕದರ್ಶನ ವರದಿ
ವಿಜಯಪುರ 27 : ವಿದ್ಯಾರ್ಥಿನಿಯರು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿವಿಧ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಂಡು ಲಭ್ಯವಿರುವ ಉದ್ಯೋಗಾವಕಾಶಗಳನ್ನು ಸಮರ್ಕವಾಗಿ ಬಳಸಿಕೊಳ್ಳಬೇಕು ಎಂದು ಮಹಿಳಾ ವಿಶ್ವವಿದ್ಯಾನಿಲಯದ ಮೌಲ್ಯಮಾಪನ ಕುಲಸಚಿವ ಪ್ರೊ. ಬಿ.ಎಲ್.ಲಕ್ಕಣ್ಣನವರ ಹೇಳಿದರು.
ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಉದ್ಯೋಗ ಮತ್ತು ವೃತ್ತಿ ಸಮಾಲೋಚನ ಕೋಶ ಹಾಗೂ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗ ಮತ್ತು ಟನ್ವಿಕ್ ಎಜುಕೇಶನ್ ಪ್ರವೇಟ್ ಲಿಮಿಟೆಡ್ ಸಹಯೋಗದಲ್ಲಿ ಇತ್ತಿಚಿಗೆ ಹಮ್ಮಿಕೊಂಡಿದ್ದ ಒಂದು ದಿನದ ಉದ್ಯೋಗ ಮೇಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ, ಬೆಂಗಳೂರಿನ ಟನ್ವಿಕ್ ಎಜುಕೇಶನ್ ಪ್ರವೇಟ್ ಲಿಮಿಟೆಡ್ನ ರವಿ ಪಿಳ್ಳೈ ಮತ್ತು ಸಂತೋಷ್, ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ. ಹನುಮಂತಯ್ಯ ಪೂಜಾರಿ, ಉದ್ಯೋಗ ಮತ್ತು ವೃತ್ತಿ ಸಮಲೋಚನಾ ಕೋಶದ ಸಂಯೋಜಕ ಡಾ.ಚಂದ್ರಶೇಖರ್ ಮಠಪತಿ, ದೈಹಿಕ ಶಿಕ್ಷಣ ವಿಭಾಗದ ಪ್ರಾಧ್ಯಾಪಕರಾದ, ಡಾ. ರಾಜಕುಮಾರ್ ಮಾಲಿಪಾಟೀಲ್ ಡಾ. ಜ್ಯೋತಿ ಉಪಾಧ್ಯಾಯ, ಡಾ. ಕಿರಣ್ ಉಪಸ್ಥಿತರಿದ್ದರು.
ವಿಭಾಗದ ವಿದ್ಯಾರ್ಥಿನಿಯರಾದ ದೀಪಾ ಸಂತಿವೂರ ಸ್ವಾಗತಿಸಿದರು, ಸಂಧ್ಯಾ ಪರಿಚಯಿಸಿದರು, ಮಹಾದೇವಿ ಮತ್ತು ಲಕ್ಷ್ಮಿ ನಾಯಕ್ ಪ್ರಾರ್ಥಿಸಿದರು, ಅಶ್ವಿನಿ ಆರ್.ಎಸ್ ನಿರೂಪಿಸಿದರು, ಲಕ್ಷ್ಮಿದೇವಿ ವಂದಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 