ದಿವ್ಯಾಂಗರು ಸಮಾಜದ ಮುಖ್ಯವಾಹಿನಿಗೆ ಬರಲು ಉದ್ಯೋಗ ಮೇಳಗಳು ಅಗತ್ಯ: ಸಿಇಒ ರಾಹುಲ್ ಶಿಂದೆ
Job fairs are necessary for the disabled to enter the mainstream of society: CEO Rahul Shinde
ಬೆಳಗಾವಿ 19: ಬೆಳಗಾವಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಶ್ರೀ ರಾಹುಲ್ ಶಿಂದೆ ಅವರು, ದಿವ್ಯಾಂಗರು ಸಮಾಜದ ಮುಖ್ಯವಾಹಿನಿಗೆ ಬರಲು ಉದ್ಯೋಗ ಮೇಳಗಳು ಅತ್ಯಂತ ಅಗತ್ಯ ಎಂದು ಪ್ರತಿಪಾದಿಸಿದರು. ಇಂದು ಬೆಳಗಾವಿಯ ಸಮರ್ಥನಂ ಅಂಗವಿಕಲರ ಸಂಸ್ಥೆ, ಜೀಜಾಮಾತಾ ಹೈ ಸ್ಕೂಲ್, ಸಿಲ್ವರ್ ಜುಬಿಲಿ ಮೆಮೋರಿಯಲ್ ಬಿಲ್ಡಿಂಗ್, ಮರಾಠಾ ಮಂಡಳ ಆವರಣ ಚವಾಟಗಲ್ಲಿ ್ಲ, ಸಂಗೊಳ್ಳಿ ರಾಯಣ್ಣ ಸರ್ಕಲ್ ಹತ್ತಿರ, ಮತ್ತು ಬಾಕ್ಲೇರ್ಸ್ ಸಹಯೋಗದಲ್ಲಿ ನಡೆದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
"ಸಮರ್ಥನಂ ಸಂಸ್ಥೆಯು ದೇಶ ವಿದೇಶಗಳಲ್ಲಿ ಮಾಡುತ್ತಿರುವ ಕೆಲಸ ಶ್ಲಾಘನೀಯ. ಇಂತಹ ಉದ್ಯೋಗ ಮೇಳಗಳು ಕೇವಲ ಉದ್ಯೋಗ ಸೃಷ್ಟಿಗೆ ಸೀಮಿತವಾಗದೆ, ದಿವ್ಯಾಂಗರ ಆತ್ಮವಿಶ್ವಾಸವನ್ನು ಹೆಚ್ಚಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ನೆರವಾಗುತ್ತವೆ" ಎಂದು ತಿಳಿಸಿದರು. ಅಲ್ಲದೆ, ಗ್ರಾಮೀಣ ಪ್ರದೇಶದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ಈ ರೀತಿಯ ಉದ್ಯೋಗ ಮೇಳಗಳು ಮತ್ತು ವೃತ್ತಿಪರ ತರಬೇತಿಗಳ ಸದುಪಯೋಗ ಪಡೆಯಬೇಕೆಂದು ಕರೆ ನೀಡಿದರು.
ಮುಂದುವರಿದು ಮಾತನಾಡಿದ ಅವರು, ಸಮರ್ಥನಂ ಸಂಸ್ಥೆಯ ವತಿಯಿಂದ 2026ರ ಜನವರಿ 2,3 ಮತ್ತು4 ರಂದು ಬೆಳಗಾವಿಯಲ್ಲಿ ನಡೆಯುವ ರಾಜ್ಯಮಟ್ಟದ ಅಂಧರ ಕ್ರಿಕೆಟ್ ಪಂದ್ಯಾವಳಿಗೆ ಜಿಲ್ಲಾ ಪಂಚಾಯತ್‌ನಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಘೋಷಿಸಿದರು. ಈ ಕಾರ್ಯಕ್ರಮದಲ್ಲಿ ತಾವೂ ಭಾಗವಹಿಸುವುದಾಗಿ ತಿಳಿಸಿ, ದಿವ್ಯಾಂಗರ ಕ್ರೀಡಾ ಮತ್ತು ಸಾಂಸ್ಕೃತಿಕ ಸಾಧನೆಗಳನ್ನು ಶ್ಲಾಘಿಸಿದರು.
ನಗರದ ಖ್ಯಾತ ಸಮಾಜ ಸೇವಕ ಹಾಗೂ ಸಮರ್ಥನಂ ಅಂಗವಿಕಲರ ಸಂಸ್ಥೆಯ ನಿರ್ದೇಶಕರಾದ ಶ್ರೀ ವೀರೇಶ ಕಿವಡಸಣ್ಣನವರ್ ಅವರು ಮಾತನಾಡಿ, "ನಮ್ಮ ಸಂಸ್ಥೆಯು 1997ರಿಂದ ನಿರಂತರವಾಗಿ ದಿವ್ಯಾಂಗರು ಮತ್ತು ಆರ್ಥಿಕವಾಗಿ ಹಿಂದುಳಿದವರ ಪ್ರಗತಿಗಾಗಿ ಶ್ರಮಿಸುತ್ತಿದೆ. ಇಲ್ಲಿಗೆ ಬಂದಿರುವ ಉದ್ಯೋಗಾಕಾಂಕ್ಷಿಗಳು ತಮ್ಮ ಶಿಕ್ಷಣಕ್ಕೆ ಅನುಗುಣವಾದ ತರಬೇತಿಗಳನ್ನು ಪಡೆದು, ಈ ಉದ್ಯೋಗ ಮೇಳದಲ್ಲಿ ಉದ್ಯೋಗ ಪಡೆದು ಸ್ವಾವಲಂಬಿಗಳಾಗಿ ಬದುಕಬೇಕು" ಎಂದು ಕರೆ ನೀಡಿದರು.
ಬೆಳಗಾವಿ ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿ ಶ್ರೀ ನಾಮದೇವ ಬಿಲ್ಕರ್ ಮಾತನಾಡಿ, ಉದ್ಯೋಗ ಮೇಳದಲ್ಲಿ ಭಾಗವಹಿಸಲು ಬಂದಿರುವ ದಿವ್ಯಾಂಗ ಅಭ್ಯರ್ಥಿಗಳು ಸಿಕ್ಕ ಚಿಕ್ಕ ಉದ್ಯೋಗವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು, ಇದರಿಂದ ತಮ್ಮ ಜೀವನವನ್ನು ಕಟ್ಟಿಕೊಳ್ಳಲು ಅನುಕೂಲವಾಗುತ್ತದೆ. ಕೆಲಸದ ಸಮಯದಲ್ಲಿ ಯಾವುದೇ ಅಡೆತಡೆಗಳಾದರೆ ಸಂಸ್ಥೆಯು ಅಥವಾ ಇಲಾಖೆಯು ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಈ ಉದ್ಯೋಗ ಮೇಳದಲ್ಲಿ ಒಟ್ಟು 275 ಅಭ್ಯರ್ಥಿಗಳು ಭಾಗವಹಿಸಿದ್ದು, ಅವರಲ್ಲಿ 46 ಜನ ವಿಶೇಷ ಚೇತನರು. 15ಕ್ಕೂ ಹೆಚ್ಚು ವಿವಿಧ ಕಂಪನಿಗಳ ಪ್ರತಿನಿಧಿಗಳು ಭಾಗವಹಿಸಿ, ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ನಡೆಸಿದರು.
ಕಾರ್ಯಕ್ರಮದಲ್ಲಿ ಎಕೆಸ್ ಕಂಪನಿಯ ಸಲಹೆಗಾರ ಮತ್ತು ಕೃಷಿಕರಾದ ಶ್ರೀ ಮಹಾಂತೇಶ್ ಪಾಟೀಲ್, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ಉದ್ಯೋಗ ಅಧಿಕಾರಿ ಶ್ರೀ ಜಿ.ಎಸ್. ಕೋರಸ್ಗಾಂವ್ ಹಾಗೂ ಸಮರ್ಥನಂ ಸಂಸ್ಥೆಯ ಶಾಖಾ ಮುಖ್ಯಸ್ಥ ಶ್ರೀ ಅರುಣ್ ಕುಮಾರ್ ಎಂ.ಜಿ. ಉಪಸ್ಥಿತರಿದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 