ಉದ್ಯೋಗ ಮೇಳಗಳು ನಿರುದ್ಯೋಗ ಪ್ರಮಾಣ ತಗ್ಗಿಸಲು ಸಹಕಾರಿ
Job fairs help reduce unemployment rate
ಉದ್ಯೋಗ ಮೇಳಗಳು ನಿರುದ್ಯೋಗ ಪ್ರಮಾಣ ತಗ್ಗಿಸಲು ಸಹಕಾರಿ
-ಸಚಿವ ಮಧು ಬಂಗಾರ್ಪ
ಹಾವೇರಿ 15: ಆಧುನಿಕ ಯುಗದಲ್ಲಿ ಉನ್ನತ ಶಿಕ್ಷಣ ಪಡೆದರೂ ಸಹ ಎಲ್ಲ ವಿಭಾಗಗಳಲ್ಲೂ ಇಂದು ಉದ್ಯೋಗದ ಕೊರತೆ ಕಾಡುತ್ತಿದೆ. ನಿರುದ್ಯೋಗ ಪ್ರಮಾಣವನ್ನು ಕಡಿಮೆ ಮಾಡಲು ಇಂತಹ ಉದ್ಯೋಗ ಮೇಳವು ಅನುಕೂಲವಾಗಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರ್ಪ ಹೇಳಿದರು.
ರಾಣೇಬೆನ್ನೂರ್ ತಾಲೂಕಿನ ಆಂಗ್ಲೋ ಉರ್ದು ಹೈಸ್ಕೂಲ್ ಮೈದಾನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಬೆಂಗಳೂರು ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಅಭ್ಯರ್ಥಿಗಳು ಉದ್ಯೋಗವನ್ನರಿಸಿ ಪಟ್ಟಣಕ್ಕೆ ಹೋಗಲು ಭಯಪಡುತ್ತಿದ್ದಾರೆ. ಹೀಗಾಗಿ ಸ್ಥಳೀಯ ಮಟ್ಟದಲ್ಲೇ ಉದ್ಯೋಗಮೇಳ ಆಯೋಜಿಸಿ ಅವರಿಗೆ ಉದ್ಯೋಗ ಕಲ್ಪಿಸಿಕೊಡುವ ವ್ಯವಸ್ಥೆಯಾಗಬೇಕು. ಶಿಕ್ಷಣ ಕ್ಷೇತ್ರದಲ್ಲೂ ಸಾಕಷ್ಟುಬದಲಾವಣೆ ತರಲಾಗಿದೆ. ಮಕ್ಕಳನ್ನು ಸರಕಾರಿ ಶಾಲೆಗಳಿಗೆ ಕಳುಹಿಸಿ ಸರ್ಕಾರಿ ಶಾಲೆಗಳಲ್ಲಿರುವ ಶಿಕ್ಷಕರು ಒಳ್ಳೆಯ ಜ್ಞಾನ ಉಳ್ಳವರಾಗಿರುತ್ತಾರೆ, ಹೀಗಾಗಿ ಗುಣಮಟ್ಟದ ಶಿಕ್ಷಣ ಪಡೆದುಕೊಳ್ಳಲು ಸಾಧ್ಯವಾಗಲಿದೆ ಎಂದರು. ರಾಜ್ಯದಲ್ಲಿ ಖಾಲಿ ಹುದ್ದೆಗಳನ್ನು ಭರ್ತಿಮಾಡಲು ಕ್ರಮ ವಹಿಸಲಾಗಿದೆ ಮತ್ತು ಶೀಘ್ರವಾಗಿ ಅಧಿಸೂಚನೆ ಹೊರಡಿಸಲಾಗುವುದು ಎಂದರು.
ಈಗಾಗಲೇ ಶಾಲೆಗಳಲ್ಲಿ ಮಕ್ಕಳಿಗೆ ಕೆಲವು ಸೌಲಭ್ಯಗಳನ್ನು ಒದಗಿಸಲಾಗಿದೆ, ಅದರ ಜೊತೆಗೆ ಮುಂದಿನ ವರ್ಷದಿಂದ ಶಾಲಾ ಮಕ್ಕಳಿಗೆ ಉಚಿತವಾಗಿ ನೋಟ್‌ಬುಕ್ ನೀಡಲಾಗುವುದು. ಪಿಯುಸಿ ವಿದ್ಯಾರ್ಥಿಗಳಿಗೂ ಉಚಿತವಾಗಿ ಪಠ್ಯಪುಸ್ತಕ ಹಾಗೂ ನೋಟ್‌ಬುಕ್ ನೀಡಲಾಗುವುದು. ಶಿಕ್ಷಣಕ್ಕೆ ಬಜೆಟ್‌ನಲ್ಲಿ ಹೆಚ್ಚು ಹಣ ನೀಡುವಂತೆಯೂ ಮುಖ್ಯಮಂತ್ರಿಯವರನ್ನು ಕೋರಲಾಗಿದೆ ಎಂದರು.
ಇಲಾಖೆಯಲ್ಲಿ ಒಳ್ಳೆಯ ಕೆಲಸಗಳು ಆಗುತ್ತಿವೆ. ಎಲ್ಲದ್ದಕ್ಕೂ ಕೆಲವರು ಟೀಕೆ ಮಾಡುತ್ತಾ ಇರುತ್ತಾರೆ ಆ ಕಡೆಗೆ ಗಮನ ಹರಿಸದೆ ನಮ್ಮ ಜವಾಬ್ದಾರಿಯನ್ನು ನಿಭಾಯಿಸುತ್ತ ಹೋಗಬೇಕು ಸರ್ಕಾರದ ಯೋಜನೆಗಳಿಂದ ಲಾಭ ಪಡೆದ ವಿದ್ಯಾರ್ಥಿಗಳು, ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿ ಸಾದಿಸಿ ಟೀಕೆಗಳಿಗೆ ಉತ್ತರ ನೀಡುತ್ತಾರೆ ಎಂದರು.
ಕಾರ್ಯಕ್ರಮದಲ್ಲಿ ರಾಣೇಬೆನ್ನೂರ್ ಶಾಸಕರಾದ ಪ್ರಕಾಶ ಕೋಳಿವಾಡ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ಆದರೆ ಮಾತ್ರ ನಾವುಗಳು ಸ್ವವಲಂಬೀಗಳಾಗುತ್ತೇವೆ ಪ್ರತಿಯೊಬ್ಬರಿಗೂ ಕೌಶಲ್ಯ ಇರಬೇಕು ಕೌಶಲ್ಯ ಇದ್ದಾಗ ಮಾತ್ರ ನಮಗೆ ಉದ್ಯೋಗ ಸಿಗಲು ಸಾಧ್ಯ ಹೀಗಾಗಿ ಪ್ರತಿಯೊಬ್ಬರೂ ಕೌಶಲ್ಯ ಬೆಳಿಸಿಕೊಳ್ಳುವುದು ಅವಶ್ಯಕತೆ ಇದೆ ಎಂದರು.
ಬಳಿಕ ಶಾಸಕರು ಹಾಗೂ ವಿಧಾನಸಭಾ ಉಪ ಸಭಾಧ್ಯಕ್ಷರಾದ ರುದ್ರ್ಪ ಲಮಾಣಿ ಮಾತನಾಡಿ, ಇಂದು ಸಾಕಷ್ಟು ಜನ ಯುವಕರು ಉತ್ತಮ ಶಿಕ್ಷಣ ಪಡೆದರೂ ಸಹ ಉದ್ಯೋಗ ಸಿಗದೇ ನಿರುದ್ಯೋಗಿಗಳಾಗಿದ್ದಾರೆ. ಇಂತಹ ಉದ್ಯೋಗ ಮೇಳದಲ್ಲಿ ಅವರಿಗೆ ಸೂಕ್ತವಾದ ಉದ್ಯೋಗ ಪಡೆದುಕೊಳ್ಳಲು ಅನುಕೂಲವಾಗಲಿದೆ ಎಂದರು.
ಬಳಿಕ ಕರ್ನಾಟಕ ಕೌಶಲ್ಯಭಿವೃದ್ಧಿ ನಿಗಮದ ಅಧ್ಯಕ್ಷರಾದ ಕಾಂತಾ ನಾಯಕ ಮಾತನಾಡಿ, ಇಂದನ ಉದ್ಯೋಗ ಮೇಳದಲ್ಲಿ ಸಾಕಷ್ಟು ಕಂಪನಿಗಳು ಉದ್ಯೋಗ ನೀಡಲು ಮುಂದೆ ಬಂದಿವೆ. ಯುವಕರು ಇದರ ಲಾಭ ಪಡೆದುಕೊಳ್ಳಬೇಕು. ನಿಮ್ಮ ಮನೆ ಬಾಗಿಲಿಗೆ ಉದ್ಯೋಗ ನೀಡಲು ಬಂದಿದ್ದಾರೆ. ಅದರ ಸಂಪೂರ್ಣ ಪ್ರಯೋಜನ ಪಡೆದುಕೊಳ್ಳುವಂತೆ ಸೂಚಿಸಿದರು. ಅಭ್ಯರ್ಥಿಗಳು ಇಲ್ಲಿ ಸಂದರ್ಶನ ಎದುರಿಸುವುದರಿಂದ ನಿಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಾಗಲಿದೆ ಇದರಿಂದ ಮುಂದೆ ನೀವುಗಳು ಆತ್ಮ ವಿಶ್ವಾಸದಿಂದ ಎಲ್ಲವನ್ನು ಎದುರಿಸಬಹುದು.ಇದರ ಜೊತೆಗೆ ಕೌಶಲ್ಯ ಕೂಡ ಬೆಳೆಸಿಕೊಳ್ಳುವುದು ಈಗಿನ ಅನಿವಾರ್ಯ ಯಾರಿಗೆ ಕೌಶಲ್ಯ ಇರುತ್ತೋ ಅವರು ಯಾವುದೇ ಕ್ಷೇತ್ರದಲ್ಲೂ ಕೂಡ ಯಶಸ್ಸು ಸಾಧಿಸವಬಲ್ಲರು. ಮಕ್ಕಳಲ್ಲಿ ಕೌಶಲ್ಯ ಬೆಳೆಸಲು ಸರ್ಕಾರವು ನನ್ನ ವೃತ್ತಿ ನನ್ನ ಆಯ್ಕೆ ಎಂಬ ಕಾರ್ಯಕ್ರಮವನ್ನು ರೂಪಿಸಿದೆ ಇದು 2.6 ಲಕ್ಷ ಮಕ್ಕಳಿಗೆ ಕೌಶಲ್ಯ ಕುರಿತು ಅರಿವು ಮೂಡಿಸುವುದಾಗಿದೆ. ಇದು ಶಾಲಾ ಹಂತ ದಿಂದಲೇ ಮಗು ಯಾವ ಶಿಕ್ಷಣ ಪಡೆದರೆ ಮುಂದೆ ಯಾವ ಉದ್ಯೋಗ ಗಿಟ್ಟಿಸಿಕೊಳ್ಳಬಹುದು ಎಂಬುವುದನ್ನು ತಿಳಿದುಕೊಳ್ಳಲು ಸಹಾಯಕರಿಯಾಗಲಿದೆ ಎಂದರು
ಇದೇ ಸಂದರ್ಭದಲ್ಲಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ನಿಧನದ ಹಿನ್ನಲೆಯಲ್ಲಿ ಅವರ ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷ ಮೌನಾಚರಣೆ ಆಚರಿಸಲಾಯಿತು.
759 ಅಭ್ಯರ್ಥಿಗಳಿಗೆ ಉದ್ಯೋಗ: ಉದ್ಯೋಗ ಮೇಳದಲ್ಲಿ 759 ಅಭ್ಯರ್ಥಿಗಳು ವಿವಿಧ ಕಂಪನಿಗಳಿಗೆ ನೇಮಕವಾಗಿದ್ದಾರೆ. ಜಿಲ್ಲಾ ಮಟ್ಟದ ಉದ್ಯೋಗ ಮೇಳಕ್ಕೆ 3,924 ಅಭ್ಯರ್ಥಿಗಳು ನೊಂದಾಯಿಸಿಕೊಂಡಿದ್ದರು ಹಾಗೂ 110 ಉದ್ಯೋಗಾತ ಕಂಪನಿಗಳು ಭಾಗವಹಿಸಿದ್ದವು. ಈ ಪೈಕಿ 2,909 ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಿದ್ದರು. 1,427 ಅಭ್ಯರ್ಥಿಗಳು ಎರಡನೇ ಹಂತದ ಸಂದರ್ಶನಕ್ಕೆ ಅರ್ಹತೆ ಪಡೆದುಕೊಂಡಿದ್ದಾರೆ.
ಕಾರ್ಯಕ್ರಮದಲ್ಲಿ ಚನ್ನಗಿರಿ ಶಾಸಕರಾದ ಶಿವಗಂಗಾ ಬಸವರಾಜ್, ಹರಪನಹಳ್ಳಿ ಶಾಸಕರಾದ ಲತಾ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಎಸ್.ಆರ್.ಪಾಟೀಲ, ಜಿಲ್ಲಾಧಿಕಾರಿ ಡಾ. ವಿಜಮಹಾಂತೇಶ್ ದಾನಮ್ಮನವರ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ. ಪುನೀತ, ಜಿಲ್ಲಾ ಕೌಶಲ್ಯಭಿವೃದ್ಧಿ ಅಧಿಕಾರಿ ಸೋನಾಲಿ ಕ್ಷೀರಸಾಗರ ಹಾಗೂ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 