ಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಿ: ವಿಠ್ಠಲ ಕಟಕಧೊಂಡ
Join hands for development in the democratic system: Vitthal Katakadhond
ಚಡಚಣ, ಸೆ.19: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು ಎಂದು ನಾಗಠಾಣ ಮತಕ್ಷೇತ್ರದ ಶಾಸಕ ವಿಠ್ಠಲ ಕಟಕಧೊಂಡ ಹೇಳಿದರು. ತಾಲೂಕಿನ ಹಲಸಂಗಿ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಶನಿವಾರ ನಡೆದ ‘ಪ್ರಜಾಸೇವಾ ಅಭಿಯಾನ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರದ ಪ್ರಜಾಸೇವಾ ಅಭಿಯಾನವು ಮುಖ್ಯಮಂತ್ರಿ ಅವರ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದ್ದು, ಗ್ರಾಮೀಣ ಪ್ರದೇಶದ ಜನರ ಬಳಿಗೆ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ತೆರಳಿ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಲು ಉತ್ತಮ ವೇದಿಕೆಯಾಗಿದೆ. ಸರ್ಕಾರ ವಿಧಾನಸೌಧಕ್ಕೆ ಮಾತ್ರ ಸೀಮಿತವಾಗಿರದೆ, ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಜನರ ಧ್ವನಿಯಾಗಿ ಕಾರ್ಯನಿರ್ವಹಿಸಬೇಕು. ತಮ್ಮ ಅವಧಿಯಲ್ಲಿ ಜನರಿಗಾಗಿ ಕೈಗೊಂಡ ಕೆಲಸಗಳ ಕುರಿತು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದರು.
ತಾಪಂ ಇಒ ಅಶೋಕಕುಮಾರ ರಾಠೋಡ ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿ ಪ್ರಜಾಸೇವಾ ಅಭಿಯಾನಕ್ಕೆ ಚಾಲನೆ ದೊರೆತಿದ್ದು, ಚಡಚಣ ತಾಲೂಕಿನಲ್ಲಿ ಎರಡನೇ ಹಂತವಾಗಿ ಹಲಸಂಗಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸರ್ಕಾರದ ಯೋಜನೆಗಳು ಹಾಗೂ ಸೌಲಭ್ಯಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಕಾರ್ಯಕ್ರಮ ನಡೆಸಲಾಗುತ್ತಿದೆ. ಸಾರ್ವಜನಿಕರಿಂದ ಸ್ವೀಕರಿಸಲಾದ ಅರ್ಜಿಗಳನ್ನು ಪರೀಶೀಲಿಸಿ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 