ಪೋಲಿಯೋ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಪಿಎಸ್‌ಐ ರಾಘವೇಂದ್ರ ಖೋತ್
Join hands to build a polio-free society: PSI Raghavendra Khot
ಲೋಕದರ್ಶನ ವರದಿ
ಕಾಗವಾಡ 30: ಪೋಲಿಯೋ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಐದು ವರ್ಷದೊಳಗಿನ ಯಾವುದೇ ಮಗು ಪೋಲಿಯೋ ಲಸಿಕೆಯಿಂದ ವಂಚಿತವಾಗದಂತೆ ಪಾಲಕರು ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ಪಿಎಸ್‌ಐ ರಾಘವೇಂದ್ರ ಖೋತ್ ಹೇಳಿದರು.
ಪಟ್ಟಣದ ಬಸ್ ನಿಲ್ದಾಣದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳ ಆರೋಗ್ಯವೇ ದೇಶದ ಅಮೂಲ್ಯ ಸಂಪತ್ತು. ಪೋಲಿಯೋ ನಿರ್ಮೂಲನೆಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ. ಪುಷ್ಪಲತಾ ಸುಣ್ಣದಕಲ್ಲ ಮಾತನಾಡಿ, ಹಿಂದೆ ಎಷ್ಟೇ ಬಾರಿ ಲಸಿಕೆ ಪಡೆದಿದ್ದರೂ ಈ ಬಾರಿಯೂ ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಿದರು.
ಜೂನ್ 28ರಂದು ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡಲಾಗಿದ್ದು, ಬಳಿಕ ಜುಲೈ 1ರವರೆಗೆ ಆರೋಗ್ಯ ಸಿಬ್ಬಂದಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮನೆಮನೆಗೆ ಭೇಟಿ ನೀಡಿ ಲಸಿಕೆ ಪಡೆಯದ ಮಕ್ಕಳನ್ನು ಗುರುತಿಸಿ ಲಸಿಕೆ ನೀಡಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾಕಾ ಪಾಟೀಲ, ನಾಥಗೌಡ ಪಾಟೀಲ, ಸುಜಾತಾ ಪಾಟೀಲ, ಸೌಮ್ಯ ಪಾಟೀಲ, ಜಾವಿದ ಮುಜಾವರ್, ರವಿಕುಮಾರ ಸಾಲುದಗಿ, ಪ್ರತಿಭಾ ನರೋಟೆ, ಸೂರಜ್ ಹೊನಕಾಂಬಳೆ, ಗೋವಿಷ್ ರಾಮದುರ್ಗ, ಸೂರಜ್ ಕುಂಬಾರ, ಸತೀಶ್ ಪಾಟೀಲ ಸೇರಿದಂತೆ ಅನೇಕ ಗಣ್ಯರು, ಸರ್ಕಾರಿ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಪಾಲಕರು ಉಪಸ್ಥಿತರಿದ್ದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 