ತಂಬಾಕು ಮುಕ್ತ ಯುವ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ -ಡಾ ರಾಜೇಂದ್ರ ಗಡಾದ
Join hands to build a tobacco-free youth society - Dr. Rajendra Gadada
ಗದಗ 13: ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ,ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ತಾಲೂಕ ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕ ಆರೋಗ್ಯ ಅಧಿಕಾರಿಗಳ ಕಚೇರಿಯ ಸಭಾಭವನದಲ್ಲಿ ಗದಗ ತಾಲೂಕಿನ ಆಶಾ ಕಾರ್ಯಕರ್ತೆಯರಿಗೆ ತಂಬಾಕು ಮುಕ್ತ ಯುವ ಅಭಿಯಾನ 3.0 ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ತಾಲೂಕ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಡಾ ರಾಜೇಂದ್ರ ಎಸ್ ಗಡಾದ ಅವರು ತಂಬಾಕು ಮುಕ್ತ ಯುವ ಅಭಿಯಾನ 3.0 ಕುರಿತು ಮಾತನಾಡಿ ಪ್ರತಿ ವರ್ಷ ವಿಶ್ವದಾದ್ಯಂತ 6 ಸೆಕೆಂಡುಗಳಿಗೊಬ್ಬರಂತೆ 60 ಲಕ್ಷಕ್ಕಿಂತ ಹೆಚ್ಚು ಜನರು ತಂಬಾಕು ಸೇವನೆಯಿಂದ ಉಂಟಾಗುವ ಕಾಯಿಲೆಗಳಿಂದ ಸಾವನ್ನಪ್ಪುತ್ತಿದ್ದಾರೆ . ಕರ್ನಾಟಕದಲ್ಲಿ ಶೇಕಡ 28.8 ರಷ್ಟು ವ್ಯಕ್ತಿಗಳು ಯಾವುದಾದರೂ ಒಂದು ರೀತಿಯ ತಂಬಾಕು ಉತ್ಪನ್ನ ಸೇವನೆ ಮಾಡುತ್ತಾರೆ ಅನೇಕರು ಯುವ ಅಂದರೆ 19 ವಯಸ್ಸಿನಲ್ಲಿಯೇ ತಂಬಾಕು ಉತ್ಪನ್ನಗಳ ಸೇವನೆಯನ್ನು ಆರಂಭಿಸುತ್ತಾರೆ ತಂಬಾಕಿನಿಂದ ಕ್ಯಾನ್ಸರ್ ಹೃದಯ ಹಾಗೂ ಶ್ವಾಸ ಸಂಬಂಧಿ ಇತ್ಯಾದಿ ಅನೇಕ ಮಾರಣಾಂತಿಕ ಕಾಯಿಲೆಗಳು ಬರುತ್ತವೆ. ತಂಬಾಕು ಮತ್ತು ತಂಬಾಕು ಉತ್ಪನ್ನಗಳಲ್ಲಿ ಸುಮಾರು ಏಳು ಸಾವಿರ ರಾಸಾಯನಿಕ ವಸ್ತುಗಳಿದ್ದು ಅದರಲ್ಲಿ 69 ರಷ್ಟು ಕ್ಯಾನ್ಸರ್ ಕಾರಕ ವಸ್ತುಗಳಿವೆ. 21 ವರ್ಷದೊಳಗಿನ ವ್ಯಕ್ತಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಶಿಕ್ಷಾಹ9 ಅಪರಾಧವಾಗಿರುತ್ತದೆ . ಈ ತಂಬಾಕು ಸೇವನೆಯ ಕುರಿತು ಜಾಗೃತಿ ಮೂಡಿಸಲು ತಂಬಾಕು ಮುಕ್ತ ಯುವ ಅಭಿಯಾನ 3.0 ಎಂಬ ಕಾರ್ಯಕ್ರಮವನ್ನು ಆರೋಗ್ಯ ಇಲಾಖೆಯು ಹಮ್ಮಿಕೊಂಡಿದ್ದು ಎಲ್ಲರೂ ಇದಕ್ಕೆ ಕೈಜೋಡಿಸಿ ಯಶಸ್ವಿಗೊಳಿಸಬೇಕೆಂದರು.
ಈ ಸಂದರ್ಭದಲ್ಲಿ ಮಾತನಾಡಿದ ಗದಗ ತಾಲೂಕ ಆಶಾ ಮೇಲ್ವಿಚಾರಕರಾದ ಶ್ರೀಮತಿ ಎನ್ ನವೀನ್ ಕುಮಾರಿ ಅವರು ತಂಬಾಕು ವಿಷನ್ ಗಳಿಗೆ ಮತ್ತು ಧೂಮಪಾನಿಗಳಿಗೆ ಉಚಿತ ಆಪ್ತ ಸಮಾಲೋಚನೆಯನ್ನು ಉಚಿತ ಓಷಧೋಪಚಾರವನ್ನು ಜಿಲ್ಲಾ ಆಸ್ಪತ್ರೆಯ ತಂಬಾಕು ವ್ಯಸನಮುಕ್ತ ಕೇಂದ್ರದಲ್ಲಿ ನೀಡಲಾಗುತ್ತಿದ್ದು ಇದರ ಸದುಪಯೋಗವನ್ನು ಪಡೆಯಬೇಕೆಂದು ಆಶಾ ಕಾರ್ಯಕರ್ತರಿಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 