ಕ್ಷಯರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ. ಇಂದ್ರಾಣಿ ವಿ. ಕರೆ
Join hands to build a tuberculosis-free society: Dr. Indrani V. Kare
ಲೋಕದರ್ಶನ ವರದಿ
ಬಳ್ಳಾರಿ, ಆ.28: ಸಮುದಾಯದಲ್ಲಿ ಹಲವು ವರ್ಷಗಳಿಂದ ಬೇರೂರಿರುವ ಕ್ಷಯರೋಗ (ಟಿಬಿ) ನಿರ್ಮೂಲನೆಗೆ ಸರ್ಕಾರ ಉಚಿತ ಚಿಕಿತ್ಸೆ ನೀಡುತ್ತಿದ್ದು, ರೋಗಿಗಳು ಇದರ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಇಂದ್ರಾಣಿ ವಿ. ಕರೆ ಹೇಳಿದರು.
ಸಂಡೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಇಲಾಖೆ, ಸಂಡೂರು ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ಶ್ರೀ ಕುಮಾರಸ್ವಾಮಿ ಮಿನರಲ್ ಎಕ್ಸ್ಪೋರ್ಟ್ಸ ಪ್ರೈ. ಲಿ. ಸಹಯೋಗದಲ್ಲಿ ಹಮ್ಮಿಕೊಂಡಿದ್ದ **‘ಪ್ರಧಾನಮಂತ್ರಿ ಕ್ಷಯಮುಕ್ತ ಭಾರತ ಅಭಿಯಾನ’**ದಡಿ ಪೌಷ್ಟಿಕ ಆಹಾರ ಕಿಟ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬ್ಯಾಕ್ಟೀರಿಯಾದಿಂದ ಉಂಟಾಗುವ ಕ್ಷಯರೋಗವು ಗಾಳಿಯ ಮೂಲಕ ಹರಡುತ್ತದೆ. ಎರಡು ವಾರಕ್ಕೂ ಹೆಚ್ಚು ಕಾಲ ಕೆಮ್ಮು, ಉಸಿರಾಟದ ತೊಂದರೆ, ಸಂಜೆ ವೇಳೆ ಜ್ವರ, ರಾತ್ರಿ ಬೆವರು, ಕಫದಲ್ಲಿ ರಕ್ತ, ಎದೆನೋವು, ಹಸಿವಾಗದಿರುವುದು ಹಾಗೂ ತೂಕ ಇಳಿಕೆಯಾಗುವುದು ಪ್ರಮುಖ ಲಕ್ಷಣಗಳಾಗಿವೆ.
ಇಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ತಪಾಸಣೆ ಮಾಡಿಸಿಕೊಳ್ಳಬೇಕು. ಕ್ಷಯರೋಗ ದೃಢಪಟ್ಟರೆ 6ರಿಂದ 9 ತಿಂಗಳವರೆಗೆ ನಿಯಮಿತವಾಗಿ ಓಷಧ ಸೇವಿಸಿ ಚಿಕಿತ್ಸೆ ಪೂರ್ಣಗೊಳಿಸಬೇಕು ಎಂದು ಅವರು ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 