ಜೋಳದರಾಶಿ ದೊಡ್ಡನಗೌಡರ ಸಾಹಿತ್ಯ ಸಂಪತ್ತು ಡಿಜಿಟಲೀಕರಣಗೊಳ್ಳಬೇಕು: ಮಾಜಿ ಸಚಿವ ಬಿ. ಶ್ರೀರಾಮುಲು
Joladarashi Doddanagoudar's literary wealth must be digitized: Former Minister B. Sriramulu
ಲೋಕದರ್ಶನ ವರದಿ
ಬಳ್ಳಾರಿ 28: ಗಮಕ ಕಲಾನಿಧಿ ಜೋಳದರಾಶಿ ದೊಡ್ಡನಗೌಡರ ಡೈರಿಗಳು, ಕ್ಯಾಸೆಟ್ಗಳು, ಹಸ್ತಪ್ರತಿಗಳು ಹಾಗೂ ಇತರೆ ಸಾಹಿತ್ಯಿಕ ಬರಹಗಳನ್ನು ಸಮಗ್ರವಾಗಿ ಡಿಜಿಟಲೀಕರಣಗೊಳಿಸುವ ಕಾರ್ಯವಾಗಬೇಕು ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಆಶಿಸಿದರು. ತಾಲೂಕಿನ ಜೋಳದರಾಶಿ ಗ್ರಾಮದಲ್ಲಿ ನವೀಕೃತ ರಾಮೇಶ ಕಲಾಮಂದಿರವನ್ನು ಲೋಕಾಪರ್ಣೆಗೊಳಿಸಿ ಅವರು ಮಾತನಾಡಿದರು.
ದೊಡ್ಡನಗೌಡರು ಕನ್ನಡ ಸಾಹಿತ್ಯ, ಗಮಕ ಕಲೆ ಹಾಗೂ ಸಾಂಸ್ಕೃತಿಕ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಅಪಾರವಾಗಿದೆ. ಅವರ ಸಾಧನೆಗಳು ಕೇವಲ ಒಂದು ಪ್ರದೇಶಕ್ಕೆ ಸೀಮಿತವಾಗದೆ ಇಡೀ ರಾಜ್ಯದ ಸಾಂಸ್ಕೃತಿಕ ಪರಂಪರೆಯ ಅಮೂಲ್ಯ ಸಂಪತ್ತಾಗಿವೆ. ಇಂತಹ ಮಹನೀಯರ ಬದುಕು, ಚಿಂತನೆ ಮತ್ತು ಸಾಹಿತ್ಯವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ಸಮಾಜದ ಮೇಲಿದೆ ಎಂದು ಹೇಳಿದರು.
ದೊಡ್ಡನಗೌಡರ ಅಮೂಲ್ಯ ದಾಖಲೆಗಳನ್ನು ಸಂರಕ್ಷಿಸಿ ಡಿಜಿಟಲ್ ರೂಪದಲ್ಲಿ ಉಳಿಸುವ ಮೂಲಕ ಸಂಶೋಧಕರು, ವಿದ್ಯಾರ್ಥಿಗಳು ಹಾಗೂ ಸಾಹಿತ್ಯಾಸಕ್ತರಿಗೆ ಸುಲಭವಾಗಿ ಲಭ್ಯವಾಗುವಂತೆ ಮಾಡಬೇಕು. ಈ ಮಹತ್ವದ ಕಾರ್ಯಕ್ಕೆ ಅಗತ್ಯ ಸಹಕಾರ ನೀಡಲು ಸದಾ ಸಿದ್ಧನಿದ್ದೇನೆ ಎಂದು ಶ್ರೀರಾಮುಲು ಭರವಸೆ ನೀಡಿದರು.
ವಿಧಾನಪರಿಷತ್ ಪ್ರತಿಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಮಾತನಾಡಿ, ಭಾರತದ ನೈಜ ಸಂಸ್ಕೃತಿ, ಸಂಪ್ರದಾಯ ಮತ್ತು ಮೌಲ್ಯಗಳು ಇಂದಿಗೂ ಗ್ರಾಮೀಣ ಬದುಕಿನಲ್ಲಿ ಜೀವಂತವಾಗಿವೆ. ಗ್ರಾಮೀಣ ಸಂಸ್ಕೃತಿ, ಪರಂಪರೆ ಮತ್ತು ಜೀವನ ಮೌಲ್ಯಗಳು ಉಳಿದು ಬೆಳೆದಾಗ ಮಾತ್ರ ಭಾರತದ ಸಾಂಸ್ಕೃತಿಕ ವೈಭವ ಮುಂದುವರಿಯಲಿದೆ ಎಂದರು.
ಆಧುನಿಕತೆಯ ಭರಾಟೆಯಲ್ಲಿ ಗ್ರಾಮೀಣ ಸಂಸ್ಕೃತಿ ಮರೆಯಾಗದಂತೆ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು. ಪುಟ್ಟ ಹಳ್ಳಿಯಲ್ಲಿ ಜನಿಸಿದ ಜೋಳದರಾಶಿ ದೊಡ್ಡನಗೌಡರು ತಮ್ಮ ಪ್ರತಿಭೆ, ಪರಿಶ್ರಮ ಮತ್ತು ಕಲಾಸೇವೆಯ ಮೂಲಕ ನಾಡಿನಾದ್ಯಂತ ವಿಶಿಷ್ಟ ಗುರುತನ್ನು ಮೂಡಿಸಿದ್ದಾರೆ. ಕನ್ನಡ ಸಾಹಿತ್ಯ, ಜನಪದ ಹಾಗೂ ಗಮಕ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆ ಹೆಮ್ಮೆಯ ಸಂಗತಿ ಎಂದು ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 