ಕಂದಾಯ ಇಲಾಖೆ ಕಾರ್ಯವೈಖರಿ ಅರಿತ ಪತ್ರಿಕೋದ್ಯಮ ವಿದ್ಯಾರ್ಥಿಗಳು
Journalism students gain insight into the functioning of the Revenue Department
ಲೋಕದರ್ಶನ ವರದಿ
ಮುಧೋಳ, ಸೆ. 29: ಬಾಗಲಕೋಟೆ ಬಿವಿವಿ ಸಂಘದ ನಗರದ ಶ್ರೀ ಎಸ್.ಆರ್. ಕಾಂತಿ ಮಹಾವಿದ್ಯಾಲಯದ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳು ಬುಧವಾರ ಮುಧೋಳ ತಾಲೂಕು ಆಡಳಿತ ಭವನದಲ್ಲಿರುವ ಕಂದಾಯ ಇಲಾಖೆಗೆ ಭೇಟಿ ನೀಡಿ, ಭೂ ಸುಧಾರಣೆ, ಕಂದಾಯ ವಸೂಲಿ, ಚುನಾವಣಾ ಪ್ರಕ್ರಿಯೆ, ವಿವಿಧ ಸರ್ಕಾರಿ ಪ್ರಮಾಣಪತ್ರಗಳ ವಿತರಣೆ, ಹೂೂಹ್ಕ್ಘಿಾ ನೋಂದಣಿ ಹಾಗೂ ಸಾರ್ವಜನಿಕರ ಕುಂದುಕೊರತೆಗಳ ನಿವಾರಣೆಯಲ್ಲಿ ತಾಲೂಕು ಆಡಳಿತದ ಪಾತ್ರ ಮತ್ತು ಕಾರ್ಯವೈಖರಿಯನ್ನು ಪ್ರತ್ಯಕ್ಷವಾಗಿ ತಿಳಿದುಕೊಂಡರು.
ಗ್ರೇಡ್-2 ತಹಸೀಲ್ದಾರ್ ಎ.ಕೆ. ಇಂಡಿಕಾರ್ ಹಾಗೂ ಕಂದಾಯ ನೀರೀಕ್ಷಕ ಪ್ರಕಾಶ ಕುಂದರಗಿ ಅವರು ಕಚೇರಿಯ ವಿವಿಧ ವಿಭಾಗಗಳಾದ ಕಂದಾಯ ಶಾಖೆ, ಶಿರಸ್ತೇದಾರ್ ಕಚೇರಿ ಹಾಗೂ ಇ-ಆಡಳಿತ ವಿಭಾಗಗಳಿಗೆ ವಿದ್ಯಾರ್ಥಿಗಳನ್ನು ಕರೆದೊಯ್ದು, ಅಲ್ಲಿನ ದೈನಂದಿನ ಕಾರ್ಯವೈಖರಿ ಮತ್ತು ವಿವಿಧ ಸೇವೆಗಳ ಕುರಿತು ವಿವರಿಸಿದರು.
ಕಂದಾಯ ಇಲಾಖೆಯ ಪ್ರಮುಖ ಜವಾಬ್ದಾರಿಗಳಾದ ಜಮೀನು ನೋಂದಣಿ, ಪಹಣಿ (ಆರ್ಟಿಸಿ) ವಿತರಣೆ, ಸಾಮಾಜಿಕ ಭದ್ರತಾ ಯೋಜನೆಗಳು ಹಾಗೂ ವಿಪತ್ತು ನಿರ್ವಹಣೆಯಲ್ಲಿ ಇಲಾಖೆಯ ಪಾತ್ರದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು. ಇತ್ತೀಚಿನ ದಿನಗಳಲ್ಲಿ ಕಂದಾಯ ಇಲಾಖೆಯಲ್ಲಿ ಆಗಿರುವ ಡಿಜಿಟಲೀಕರಣ ಹಾಗೂ ಆನ್ಲೈನ್ ಸೇವೆಗಳ ಪ್ರಗತಿಯನ್ನು ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆ ಮೂಲಕ ವಿವರಿಸಲಾಯಿತು.
ಬಳಿಕ ತಹಸೀಲ್ದಾರ್ ಡಾ. ಚಿಕ್ಕಪ್ಪ ನಾಯಕ ಅವರನ್ನು ಭೇಟಿ ಮಾಡಿದ ವಿದ್ಯಾರ್ಥಿಗಳು ಅವರೊಂದಿಗೆ ಸಂವಾದ ನಡೆಸಿ, ತಾಲೂಕಿನಲ್ಲಿ ಪ್ರಚಲಿತದಲ್ಲಿರುವ ಸಮಸ್ಯೆಗಳು ಹಾಗೂ ಆಡಳಿತಾತ್ಮಕ ಸವಾಲುಗಳನ್ನು ಅಧಿಕಾರಿಗಳು ಹೇಗೆ ಎದುರಿಸುತ್ತಾರೆ ಎಂಬುದರ ಕುರಿತು ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಡಾ. ಚಿಕ್ಕಪ್ಪ ನಾಯಕ ಅವರು ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ತಹಸೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿಗಳ ಜವಾಬ್ದಾರಿಗಳು ಮತ್ತು ಅವುಗಳ ನಿರ್ವಹಣೆಯ ಕುರಿತು ವಿವರಿಸಿದರು. ತಾಲೂಕು ಆಡಳಿತವು ಸರ್ಕಾರದ ವಿವಿಧ ಯೋಜನೆಗಳನ್ನು ತಳಮಟ್ಟದ ಜನರಿಗೆ ತಲುಪಿಸುವ ಪ್ರಮುಖ ಕೊಂಡಿಯಾಗಿದೆ. ಮಾಧ್ಯಮ ರಂಗಕ್ಕೆ ಪದಾರೆ್ಣ ಮಾಡುವ ವಿದ್ಯಾರ್ಥಿಗಳಿಗೆ ಆಡಳಿತ ವ್ಯವಸ್ಥೆಯ ಸಂಪೂರ್ಣ ಜ್ಞಾನ ಹೊಂದಿರುವುದು ಅತ್ಯಗತ್ಯ ಎಂದು ಹೇಳಿದರು.
ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ವಿಧಾನ ಹಾಗೂ ಪಾರದರ್ಶಕ ಆಡಳಿತದ ಕುರಿತು ಅಧಿಕಾರಿಗಳೊಂದಿಗೆ ಸಂವಾದ ನಡೆಸಿದ ವಿದ್ಯಾರ್ಥಿಗಳು ತಮ್ಮ ಕುತೂಹಲಗಳಿಗೆ ಉತ್ತರ ಪಡೆದುಕೊಂಡರು.
ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ವಿಶ್ವನಾಥ ಮುನವಳ್ಳಿ, ಸಹ ಉಪನ್ಯಾಸಕ ಮಹಾಂತೇಶ ಹಿರೇಮಠ ಹಾಗೂ ಬಿಎ ಪ್ರಥಮ, ದ್ವಿತೀಯ ಮತ್ತು ತೃತೀಯ ವರ್ಷದ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಅಂಗಾರಕ ಸಂಕಷ್ಟಿ : ನೀಲಗಾರ ಗಣೇಶ ದರ್ಶನಕ್ಕೆ ಬೀಗಿ ಬಂದೋಬಸ್ತ್ : ಭಕ್ತರ ಸಂಖ್ಯೆ ಇಳಿಮುಖ
ಹಳೇ ವೈಷಮ್ಯ: ವ್ಯಕ್ತಿಯ ಅಪಹರಣ, ಕೊಲೆ: ನಾಲ್ವರು ಆರೋಪಿಗಳ ಬಂಧನ
ಐವರು ಪೋಲಿಸರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ನಾಗರಿಕರ ಪ್ರತಿಭಟನೆ, ನೀಲಗಾರ ಗಣಪತಿ ದರ್ಶನ ರದ್ದು
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ 