ಪತ್ರಿಕೋದ್ಯಮ ವಿದ್ಯಾರ್ಥಿಗಳು ಕೌಶಲ ಬೆಳೆಸಿಕೊಳ್ಳಬೇಕು: ಚಂದ್ರಶೇಖರ ಪಮ್ಮಾರ
Journalism students must develop skills: Chandrashekhar Pammara
ಲೋಕದರ್ಶನ ವರದಿ
ಪತ್ರಿಕೋದ್ಯಮ ವಿದ್ಯಾರ್ಥಿಗಳು ಕೌಶಲ ಬೆಳೆಸಿಕೊಳ್ಳಬೇಕು: ಚಂದ್ರಶೇಖರ ಪಮ್ಮಾರ
ಮುದ್ದೇಬಿಹಾಳ 16: ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹೆಸರು, ಗೌರವ ಹಾಗೂ ಉತ್ತಮ ಸ್ಥಾನಮಾನ ಗಳಿಸಲು ವಿದ್ಯಾರ್ಥಿಗಳು ಬರವಣಿಗೆ ಕೌಶಲ, ಸೃಜನಶೀಲತೆ, ತಾಂತ್ರಿಕ ಜ್ಞಾನ ಮತ್ತು ವೃತ್ತಿಪರ ನೈಪುಣ್ಯವನ್ನು ಬೆಳೆಸಿಕೊಳ್ಳಬೇಕು ಎಂದು ರನ್ನ ಸುದ್ದಿ ವಾಹಿನಿಯ ಸಂಸ್ಥಾಪಕ ಚಂದ್ರಶೇಖರ ಪಮ್ಮಾರ ಹೇಳಿದರು.
ಬಾಗಲಕೋಟೆ ಬಿವಿವಿ ಸಂಘದ ನಗರದ ಎಸ್.ಆರ್. ಕಂಠ ಮಹಾವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಗುರುವಾರ ಆಯೋಜಿಸಿದ್ದ ’ಪತ್ರಿಕಾ ದಿನಾಚರಣೆಹಿ2026' ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪತ್ರಿಕೋದ್ಯಮ ವಿದ್ಯಾರ್ಥಿಗಳು ವ್ಯಾಸಂಗದ ಅವಧಿಯಲ್ಲೇ ಉತ್ತಮ ಲೇಖನಗಳನ್ನು ಬರೆಯುವ ಅಭ್ಯಾಸ ರೂಢಿಸಿಕೊಳ್ಳಬೇಕು. ತಮ್ಮ ಪ್ರತಿಭೆಯನ್ನು ಸಮಾಜದ ಮುಂದೆ ತೋರಿಸಲು ಮಾಧ್ಯಮ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗಾವಕಾಶಗಳಿದ್ದು, ಅವುಗಳನ್ನು ಸಮರ್ಕವಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಇಂದಿನ ಡಿಜಿಟಲ್ ಯುಗದಲ್ಲಿ ಕಂಪ್ಯೂಟರ್ ಜ್ಞಾನ, ವಿಡಿಯೊ ಸಂಪಾದನೆ (ವಿಡಿಯೊ ಎಡಿಟಿಂಗ್) ಹಾಗೂ ಬಹುಭಾಷಾ ಕೌಶಲ ಅತ್ಯಂತ ಅಗತ್ಯವಾಗಿದೆ. ಸಾಮಾಜಿಕ ಮಾಧ್ಯಮಗಳನ್ನು ಜವಾಬ್ದಾರಿಯುತವಾಗಿ ಬಳಸಿಕೊಂಡರೆ ಉತ್ತಮ ವೃತ್ತಿ ಹಾಗೂ ಆದಾಯದ ಅವಕಾಶಗಳೂ ದೊರೆಯುತ್ತವೆ ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಮಾತನಾಡಿದ ಕಾಲೇಜಿನ ಇಂಗ್ಲಿಷ್ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಡಾ. ಎಂ.ಎಚ್. ಜೋಗಿ, ಮಾಧ್ಯಮ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿದ್ದರೂ ವಿದ್ಯಾರ್ಥಿಗಳು ತಮ್ಮ ವೃತ್ತಿಪರ ಕೌಶಲವನ್ನು ನಿರಂತರವಾಗಿ ವಿಸ್ತರಿಸಿಕೊಳ್ಳಬೇಕು ಎಂದು ತಿಳಿಸಿದರು.
ಕಾಲೇಜಿನ ಹಳೆಯ ವಿದ್ಯಾರ್ಥಿ ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಸಂಶೋಧನಾರ್ಥಿ ಶಿವಾನಂದ ನೇಗಿನಾಳ ಮಾತನಾಡಿ, ಮಾಧ್ಯಮ ಕ್ಷೇತ್ರ ವಿಶಾಲವಾಗಿದ್ದು, ವಿದ್ಯಾರ್ಥಿಗಳು ತಮ್ಮ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ತಕ್ಕಂತೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ. ಎಂ.ಆರ್. ಜರಕುಂಟಿ ಮಾತನಾಡಿ, ಪತ್ರಿಕೋದ್ಯಮ ವಿದ್ಯಾರ್ಥಿಗಳ ಪ್ರಾಯೋಗಿಕ ಕಲಿಕೆಗೆ ಅಗತ್ಯವಾದ ಕಂಪ್ಯೂಟರ್ ಲ್ಯಾಬ್ ಹಾಗೂ ಸ್ಟುಡಿಯೊ ಸೌಲಭ್ಯಗಳನ್ನು ಕಾಲೇಜಿನಲ್ಲಿ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಅವುಗಳನ್ನು ಸಮರ್ಕವಾಗಿ ಬಳಸಿಕೊಂಡು ಸಂಸ್ಥೆಗೆ ಕೀರ್ತಿ ತರಬೇಕು ಎಂದು ಹೇಳಿದರು.
ಐಕ್ಯೂಎಸಿ ಸಂಯೋಜಕ ಪ್ರೊ. ಅಜಯ ಕಡುರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ವಿಶ್ವನಾಥ ಮುನವಳ್ಳಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ವಿದ್ಯಾರ್ಥಿನಿಯರಾದ ಪ್ರೀತಿ ಬಾವಲಟ್ಟಿ ಮತ್ತು ಸ್ನೇಹಾ ಕರಡಿ ಪ್ರಾರ್ಥನೆ ಸಲ್ಲಿಸಿದರು. ಪ್ರಥಮ ವರ್ಷದ ವಿದ್ಯಾರ್ಥಿಗಳಾದ ಮಹಾದೇವಿ ಕಾಳವ್ಯಗೋಳ, ಶೋಭಾ ಸತ್ತಿಗೇರಿ, ಅನ್ನಪೂರ್ಣಾ ಅವರಾಧಿ ಹಾಗೂ ಬಾಬು ಭಜಂತ್ರಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಉಪನ್ಯಾಸಕ ಮಹಾಂತೇಶ ಹಿರೇಮಠ ನಿರೂಪಿಸಿ, ವಿದ್ಯಾರ್ಥಿನಿ ಸ್ನೇಹಾ ಕರಡಿ ವಂದಿಸಿದರು.
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪೊಟೋ ಜು.16 : ಎಂಡಿಎಲ್ 1ಎ, 1ಬಿ. ಮುಧೋಳ ಎಸ್.ಆರ್.ಕಂಠಿ ಪದವಿ ಕಾಲೇಜಿನ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ವತಿಯಿಂದ ಪತ್ರಿಕಾ ದಿನಾಚರಣೆ ಆಚರಿಸಲಾಯಿತು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 