ಪತ್ರಕರ್ತನ ಮನೆಗೆ ನುಗ್ಗಿ ಜೀವಬೆದರಿಕೆ: ಅಕ್ಕಿ ಮಾಫಿಯಾ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ: ಅಧ್ಯಕ್ಷ ಮಹಾಂತೇಶ
Journalist's house barged into and death threat issued; demand for strict action against rice mafia
ಸಿಂದಗಿ 27: ಸರ್ಕಾರದ ಅನ್ನಭಾಗ್ಯ ಯೋಜನೆಯ ಅಕ್ಕಿಯ ಕಾಳಸಂತೆ ಹಾಗೂ ಅಕ್ರಮ ದಂಧೆಯ ಕುರಿತು ಜವಾಬ್ದಾರಿಯುತವಾಗಿ ತನಿಖಾ ವರದಿ ಪ್ರಕಟಿಸಿದ್ದ ಪತ್ರಕರ್ತ ಪರಶುರಾಮ ಶಿವಶರಣ ಅವರ ಮನೆಗೆ ಅಕ್ರಮವಾಗಿ ಪ್ರವೇಶಿಸಿ, ಕುಟುಂಬಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಸಿ ಜೀವಬೆದರಿಕೆ ಹಾಕಿರುವುದು ಅತ್ಯಂತ ಖಂಡನೀಯ. ಇದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತರುವಂತಹ ಕೃತ್ಯ ಎಂದು ಸಿಂದಗಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮಹಾಂತೇಶ ನೂಲಾನವರ ಖಂಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಸಮಾಜದಲ್ಲಿನ ಅಕ್ರಮ ಹಾಗೂ ಭ್ರಷ್ಟಾಚಾರಗಳನ್ನು ಬಯಲಿಗೆಳೆಯಲು ಜೀವದ ಹಂಗು ತೊರೆದು ಕಾರ್ಯನಿರ್ವಹಿಸುವ ಪತ್ರಕರ್ತರಿಗೆ ಸೂಕ್ತ ರಕ್ಷಣೆ ಒದಗಿಸುವುದು ಆಡಳಿತ ಯಂತ್ರದ ಕರ್ತವ್ಯವಾಗಿದೆ. ಪತ್ರಕರ್ತ ಪರಶುರಾಮ ಶಿವಶರಣ ಅವರಿಗೆ ಜೀವಬೆದರಿಕೆ ಹಾಕಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಯಾವುದೇ ವಿಳಂಬ ಮಾಡದೆ ಆರೋಪಿಗಳನ್ನು ತಕ್ಷಣ ಬಂಧಿಸಿ, ಕಾನೂನು ಬದ್ಧವಾಗಿ ಕಠಿಣ ಕ್ರಮ ಕೈಗೊಳ್ಳಬೇಕು. ಪತ್ರಕರ್ತರು ನಿರ್ಭೀತಿಯಿಂದ ತಮ್ಮ ಕರ್ತವ್ಯ ನಿರ್ವಹಿಸಲು ಅಗತ್ಯ ಭದ್ರತೆ ಕಲ್ಪಿಸುವುದರ ಜೊತೆಗೆ, ಪತ್ರಕರ್ತರಿಗೆ ಬೆದರಿಕೆ ಹಾಕುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವ ಮೂಲಕ ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸ್ ಇಲಾಖೆ ಎಚ್ಚರಿಕೆ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 