ಪತ್ರಕರ್ತ ರಾಕೇಶ ಬಡಿಗೇರ ನಿಧನ

Journalist Rakesh Badigera passes away

ರಾಯಬಾಗ 10: ಪಟ್ಟಣದ ಪತ್ರಕರ್ತ ಹಾಗೂ ಸಾಮಾಜಿಕ ಕಾರ್ಯಕರ್ತ ರಾಕೇಶ ನಾಮದೇವ ಬಡಿಗೇರ ಇಂದು ಮುಂಜಾನೆ ನಿಧನರಾಗಿದ್ದಾರೆ.  

45 ವರ್ಷ ರಾಕೇಶ್ ಅವರು ಕಳೆದ ದಿ. 4ರಂದು ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಬೆಳ್ಳಿಗ್ಗೆ ಸಾವನ್ನಪ್ಪಿದ್ದಾರೆ.  

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಹಾಗೂ ಅಪಾರ ಬಂಧುಬಳಗ ಅಗಲಿದ್ದಾರೆ. ರಾಯಬಾಗದ ಸಮಸ್ತ ಪತ್ರಕರ್ತರು ರಾಕೇಶ ಬಡಿಗೇರ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.