ಪತ್ರಕರ್ತರ ಮನೆಗೆ ತೆರಳಿ ಜೀವ ಬೆದರಿಕೆ: ಕಠಿಣ ಕ್ರಮಕ್ಕೆ ಆಗ್ರಹ
Journalist threatened with death at home; demand for stern action
ಲೋಕದರ್ಶನ ವರದಿ
ಚಡಚಣ 28: ಅನ್ನಭಾಗ್ಯ ಯೋಜನೆಯ ಅಕ್ಕಿ ಅಕ್ರಮ ದಂಧೆ ಕುರಿತು ವರದಿ ಪ್ರಕಟಿಸಿದ ವಿಜಯಪುರ ಜಿಲ್ಲೆಯ ಪತ್ರಕರ್ತ ಪರಶುರಾಮ ಶಿವಶರಣ ಅವರ ಮನೆಗೆ ಕೆಲವರು ತೆರಳಿ ಜೀವ ಬೆದರಿಕೆ ಹಾಕಿರುವ ಘಟನೆ ಖಂಡಿಸಿ, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ಕಾನಿಪ ಸಂಘ (ಚಡಚಣ), ಚಡಚಣ ತಾಲೂಕು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಶುಕ್ರವಾರ ತಹಶೀಲ್ದಾರ್ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಅನ್ನಭಾಗ್ಯ ಯೋಜನೆಯ ಅಕ್ಕಿ ಅಕ್ರಮ ದಂಧೆ ಕುರಿತು ಪರಶುರಾಮ ಶಿವಶರಣ ಅವರು ಜವಾಬ್ದಾರಿಯುತವಾಗಿ ತನಿಖಾ ವರದಿ ಪ್ರಕಟಿಸಿದ್ದರು. ಇದರಿಂದ ಅಕ್ರಮದಲ್ಲಿ ಭಾಗಿಯಾಗಿರುವ ಕೆಲವರು ಪತ್ರಕರ್ತರ ಮನೆಗೆ ತೆರಳಿ ಬೆದರಿಕೆ ಹಾಕಿ, ಕುಟುಂಬದಲ್ಲಿ ಭಯದ ವಾತಾವರಣ ಸೃಷ್ಟಿಸಿರುವುದು ಖಂಡನೀಯ ಎಂದು ಸಂಘಟನೆಗಳ ಮುಖಂಡರು ಹೇಳಿದರು.
ಪತ್ರಕರ್ತರು ಸಮಾಜದಲ್ಲಿನ ಅಕ್ರಮ, ಭ್ರಷ್ಟಾಚಾರ ಹಾಗೂ ಸಾರ್ವಜನಿಕ ಹಿತಾಸಕ್ತಿಯ ವಿಷಯಗಳನ್ನು ಜನರ ಮುಂದಿಡುವುದು ಅವರ ವೃತ್ತಿಪರ ಕರ್ತವ್ಯ. ಈ ಕಾರಣಕ್ಕಾಗಿ ಪತ್ರಕರ್ತರಿಗೆ ಬೆದರಿಕೆ ಹಾಕುವುದು ಪತ್ರಿಕಾ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳನ್ನು ತಕ್ಷಣ ಪತ್ತೆಹಚ್ಚಿ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಅಲ್ಲದೆ, ಪತ್ರಕರ್ತರಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ವಸಂತ ಭೈರಾಮಡಿ, ಚಡಚಣ ಕಾನಿಪ ಸಂಘದ ಅಧ್ಯಕ್ಷ ರಮೇಶ ಬಿರಾದಾರ, ಮಾಜಿ ಅಧ್ಯಕ್ಷ ಪ್ರಭಾಕರ ಗೂಳಿಪಾಟೀಲ, ಪ್ರಧಾನ ಕಾರ್ಯದರ್ಶಿ ರಾಜಶೇಖರ ಡೋಣಜಮಠ, ಖಜಾಂಚಿ ವಿನಯ ಜೀರಂಕಲಗಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಶಿವಾನಂದ ಶಿವಶರಣ, ಉಪಾಧ್ಯಕ್ಷ ಸಂಗಮೇಶ ಎಚ್. ಹೂಗಾರ ಸೇರಿದಂತೆ ಪತ್ರಕರ್ತರು ಹಾಗೂ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 