ಪತ್ರಕರ್ತರು ಸಮಾಜದ ಪ್ರತಿಬಿಂಬ: ಶಿವಯೋಗಿಶ್ರೀ
Journalists are a reflection of society: Shivayogi Shree
ದೇವರಹಿಪ್ಪರಗಿ 13: ಸಂವಿಧಾನದ ನಾಲ್ಕನೇ ಅಂಗವಾಗಿರುವ ಪತ್ರಿಕಾರಂಗ ಶ್ರೇಷ್ಠವಾದದ್ದು. ಅನೇಕ ಸವಾಲುಗಳ ಮಧ್ಯೆ ಜನರಿಗೆ ಮಾಹಿತಿ ನೀಡುವ ಕಾರ್ಯ ಪತ್ರಕರ್ತರು ಮಾಡುತ್ತಾರೆ. ಪತ್ರಕರ್ತರು ಸೇವೆ ಅಮೂಲ್ಯವಾದದ್ದು ಎಂದು ಪರದೇಶಿ ಮಠದ ಶಿವಯೋಗಿ ಮಹಾಸ್ವಾಮಿಗಳು ಹೇಳಿದರು.
ಪಟ್ಟಣದ ಪರದೇಶಿ ಮಠದ ಆವರಣದಲ್ಲಿ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಗೆ ಶನಿವಾರ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ಪತ್ರಕರ್ತರು ಸರ್ಕಾರ ಮತ್ತು ಸಮಾಜದ ಪ್ರತಿಬಿಂಬ ಹಾಗೂ ಕೊಂಡಿಯಾಗಿ ಕಾರ್ಯ ನಿರ್ವಹಿಸುತ್ತಾರೆ. ಪತ್ರಕರ್ತರು ಕನ್ನಡಿ ಇದ್ದಂತೆ. ನಾವು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸ ಇದ್ದ ರೀತಿಯಲ್ಲಿ ಸಮಾಜಕ್ಕೆ ತಿಳಿಸುವ ಕೆಲಸ ಮಾಡುತ್ತಾರೆ. ಹಲವಾರು ಮಾರ್ಗದರ್ಶನ ಮಾಡುತ್ತಾರೆ. ಸಮಾಜದಲ್ಲಿ ದಿಕ್ಕೂಚಿಯಾಗಿ ಸೇವೆ ನೀಡುತ್ತಾರೆ. ಪತ್ರಕರ್ತರನ್ನು ಗುರುತಿಸಿ ಬೆನ್ನು ತಟ್ಟುವ ಕೆಲಸ ಎಲ್ಲರಿಂದ ಆಗಬೇಕು. ಸಮಾಜಮುಖೀ ಪತ್ರಕರ್ತರಿಗೆ ಸಮಾಜದಲ್ಲಿ ಬೆಲೆ ಇದ್ದೇ ಇರುತ್ತದೆ ಎಂದರು.
ಪ್ರಾಸ್ತಾವಿಕವಾಗಿ ಪಟ್ಟಣದ ಪ್ರಮುಖರಾದ ಶಂಕರಗೌಡ ಪಾಟೀಲ ಅವರು ಮಾತನಾಡಿ, ಪತ್ರಿಕೆಗಳು ಸಮಾಜದ ಬೆಳವಣಿಗೆಯ ಕನ್ನಡಿ. ಸಮಾಜ ತಿದ್ದುವ ಶಕ್ತಿ ಪತ್ರಿಕೆಗಳಿಗಿದೆ. ಸಮಾಜದಲ್ಲಿ ಪತ್ರಿಕೆ ಮತ್ತು ಪತ್ರಕರ್ತರಿಗೆ ಮಹತ್ತರ ಗೌರವವಿದೆ. ಸಮಾಜಕ್ಕೆ ಅವರ ಕೊಡುಗೆ ಅನನ್ಯ ಎಂದರು.
ತಾಲೂಕು ಕಾನಿಪ ಸಂಘದ ಅಧ್ಯಕ್ಷ ಸಂಗಮೇಶ ಉತ್ನಾಳ ಅವರು ಮಾತನಾಡಿ, ತಾಲೂಕಿನ ಸಮಸ್ಯೆಗಳಿಗೆ ಸ್ಪಂದಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ, ಶ್ರೀಗಳ ಮಾರ್ಗದರ್ಶನದಲ್ಲಿ ಇನ್ನೂ ಹೆಚ್ಚಿನ ಕೆಲಸ ಮಾಡೋಣ ಎಂದು ಹೇಳಿದರು.
ತಾಲೂಕು ಕಾನಿಪ ಖಜಾಂಚಿಗಳಾದ ಮಲ್ಲಿಕಾರ್ಜುನ ಪಟ್ಟಣಶೆಟ್ಟಿ, ಉಪಾಧ್ಯಕ್ಷರಾದ ಮಂಜುನಾಥ ಬ್ಯಾಕೋಡ, ಕಾರ್ಯದರ್ಶಿಗಳಾದ ಹುಸೇನ ಕೊಕಟನೂರ, ಮಳೆಪ್ಪಗೌಡ ಬಿರಾದಾರ, ಕರವೇ ಅಧ್ಯಕ್ಷ ರಹೀಮಾನ ಕನಕಲ್, ಮುಖಂಡರುಗಳಾದ ಶಿವರಾಯ ಮಸಿಬಿನಾಳ, ಶಿವಣ್ಣ ವಸ್ತ್ರದ, ಮಹಾಂತೇಶ ಇಂಡಿ, ಕಿರಣ ಅಂಬಲಗಿ, ಪುನೀತ ದೇವಣಗಾಂವ ಸೇರಿದಂತೆ ಶ್ರೀಮಠದ ಭಕ್ತರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 