ಪತ್ರಕರ್ತರು ಗುಂಪುಗಾರಿಕೆ ಬಿಟ್ಟು ಅಧ್ಯಯನಶೀಲರಾಗಲಿ: ರಾಯರೆಡ್ಡಿ
Journalists should shun factionalism and cultivate a studious approach: Rayareddy
ಯಲಬುರ್ಗಾ ಸೆ.25: ಪತ್ರಕರ್ತರು ರಾಜಕಾರಣಿಗಳಂತೆ ಗುಂಪುಗಾರಿಕೆಯಲ್ಲಿ ತೊಡಗದೆ, ಅಧ್ಯಯನಶೀಲರಾಗಿ ಸಮಾಜದ ಹಿತಕ್ಕಾಗಿ ಕೆಲಸ ಮಾಡಬೇಕು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಸಲಹೆ ನೀಡಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕೊಪ್ಪಳ ಜಿಲ್ಲಾ ಘಟಕ ಹಾಗೂ ಯಲಬುರ್ಗಾ ತಾಲೂಕು ಘಟಕದ ಸಹಯೋಗದಲ್ಲಿ ಪಟ್ಟಣದ ಬುದ್ಧ, ಬಸವ, ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಪತ್ರಿಕಾ ದಿನಾಚರಣೆ, ಕೆಯುಡಬ್ಲ್ಯುಜೆ ಹಾಗೂ ದತ್ತಿ ಪ್ರಶಸ್ತಿ ಪ್ರದಾನ ಮತ್ತು ಜಿಲ್ಲಾ ಮಟ್ಟದ ಪತ್ರಕರ್ತರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಪತ್ರಿಕಾರಂಗ ಪ್ರಜಾಪ್ರಭುತ್ವದ ಅಲಿಖಿತ ನಾಲ್ಕನೇ ಅಂಗವಾಗಿದ್ದು, ಸಾಮಾಜಿಕ ಹಾಗೂ ರಾಜಕೀಯ ವ್ಯವಸ್ಥೆಯನ್ನು ತಿದ್ದುವ ಶಕ್ತಿ ಹೊಂದಿದೆ. ಹೀಗಾಗಿ ಪತ್ರಕರ್ತರು ಶಿಸ್ತು, ಬದ್ಧತೆ ಹಾಗೂ ನೀತಿ ಸಂಹಿತೆಯೊಂದಿಗೆ ಕಾರ್ಯನಿರ್ವಹಿಸಬೇಕು. ಯಾವುದೇ ವಿಷಯದ ಕುರಿತು ವರದಿ ಮಾಡುವ ಮುನ್ನ ಅದರ ಬಗ್ಗೆ ಸಂಪೂರ್ಣ ಅಧ್ಯಯನ ನಡೆಸಿ, ಜನಪ್ರತಿನಿಧಿಗಳ ತಪ್ಪು ಹಾಗೂ ಸಾಧನೆ ಎರಡನ್ನೂ ವಸ್ತುನಿಷ್ಠವಾಗಿ ಜನರಿಗೆ ತಿಳಿಸಬೇಕು ಎಂದರು.
ಡಿಜಿಟಲ್ ಯುಗದಲ್ಲಿ ಮಾಹಿತಿ ಅತ್ಯಂತ ವೇಗವಾಗಿ ಹರಡುತ್ತಿದ್ದು, ಮಾಧ್ಯಮಗಳ ಮೂಲಕ ಸಮಾಜಕ್ಕೆ ಉತ್ತಮ ಹಾಗೂ ಜವಾಬ್ದಾರಿಯುತ ಮಾಹಿತಿ ತಲುಪಬೇಕು ಎಂದು ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಮಾತನಾಡಿ, ಇತ್ತೀಚೆಗೆ ಅಪರಾಧ ಚಟುವಟಿಕೆ ಹಾಗೂ ಬ್ಲ್ಯಕ್‌ಮೇಲ್‌ನಲ್ಲಿ ತೊಡಗುವ ಪತ್ರಕರ್ತರ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಸಮಾಜ ಹಾಗೂ ರಾಜಕಾರಣಿಗಳು ಎಚ್ಚರ ವಹಿಸಬೇಕು ಎಂದರು.
ಮಾಧ್ಯಮ ಅಕಾಡೆಮಿ ಸದಸ್ಯ ಕೆ. ನಿಂಗಜ್ಜ ಮಾತನಾಡಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯದಲ್ಲಿ ಅತ್ಯಂತ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದ್ದು, ಪತ್ರಕರ್ತರ ಹಿತಾಸಕ್ತಿಗೆ ಬೆನ್ನೆಲುಬಾಗಿದೆ ಎಂದರು.
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ 