ಕೆ.ಜೆ. ಸೋಮಯ್ಯ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
Joyful Independence Day celebration at K.J. Somaiya School
ಸಮೀರವಾಡಿ 16 : ಸಮೀರವಾಡಿಯ ಕೆ.ಜೆ. ಸೋಮಯ್ಯ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ, ದೇಶಭಕ್ತಿ ಹಾಗೂ ಉತ್ಸಾಹದಿಂದ ಆಚರಿಸಲಾಯಿತು. ಜಿಬಿಎಲ್ ಸಮೀರವಾಡಿಯ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಉಪ ಪ್ರಧಾನ ವ್ಯವಸ್ಥಾಪಕ ಡಾ. ರಮೇಶ್ ಶೆಟ್ಟರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು, ‘ಮೇಕ್ ಇನ್ ಇಂಡಿಯಾ’, ‘ಆತ್ಮನಿರ್ಭರ ಭಾರತ’ ಹಾಗೂ ಸಾಮಾಜಿಕ ಜವಾಬ್ದಾರಿಯ ಮಹತ್ವವನ್ನು ವಿವರಿಸಿ, ಉತ್ತಮ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು. ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಗೆ ತತ್ವಗಳನ್ನು ಪಾಲಿಸುವ ಅಗತ್ಯವಿದೆ ಎಂದು ತಿಳಿಸಿದರು.
ಶಾಲೆಯ ಪ್ರಾಂಶುಪಾಲ ಅನಿಲಕುಮಾರ ಸಿ. ಅವರು ವಿದ್ಯಾರ್ಥಿಗಳು ಉತ್ತಮ ಭಾರತದ ನಿರ್ಮಾಣದಲ್ಲಿ ಪ್ರಮುಖ ಪಾತ್ರವಹಿಸಬೇಕು ಎಂದು ತಿಳಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಇಂಗ್ಲಿಷ್, ಕನ್ನಡ ಮತ್ತು ಹಿಂದಿ ಭಾಷಣಗಳು, ಶಾಲಾ ಗಾಯನ ತಂಡದ ದೇಶಭಕ್ತಿ ಗೀತೆಗಳು, ನೃತ್ಯ ಹಾಗೂ ಮಾಹಿತಿಪೂರ್ಣ ಕಿರುನಾಟಕಗಳು ಗಮನ ಸೆಳೆದವು. ಕಾರ್ಯಕ್ರಮದಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ಪೋಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 