ಆರ್.ಎಂ. ಶಹಾ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ
Joyous Independence Day Celebration at R.M. Shah School
ಇಂಡಿ 16 : ಆರ್.ಎಂ. ಶಹಾ ಪಬ್ಲಿಕ್ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ದೇಶಭಕ್ತಿ ಹಾಗೂ ಶಿಸ್ತಿನೊಂದಿಗೆ ಆಚರಿಸಲಾಯಿತು. ಶಾಲೆಯ ಅಧ್ಯಕ್ಷ ಡಿ.ಆರ್. ಶಹಾ ಧ್ವಜಾರೋಹಣ ನೆರವೇರಿಸಿದರು. ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ, ದೇಶಭಕ್ತಿ ಗೀತೆಗಳು, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಭಾಷಣಗಳು ನಡೆದವು. ಶೈಕ್ಷಣಿಕ ಸಾಧನೆ ಮಾಡಿದ ಶಿಕ್ಷಕರಾದ ಅಲ್ಲಾಬಕ್ಷ ಉಕ್ಕಲಿ ಹಾಗೂ ಮಲ್ಲಿಕಾರ್ಜುನ ಪಾಟೀಲ ಅವರನ್ನು ಸನ್ಮಾನಿಸಲಾಯಿತು. ಸಹಪಠ್ಯ ಚಟುವಟಿಕೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣಪತ್ರ ವಿತರಿಸಲಾಯಿತು. ವಿದ್ಯಾರ್ಥಿಗಳು ದೇಶಭಕ್ತಿ, ಶಿಸ್ತು, ಧೈರ್ಯ ಹಾಗೂ ಸೇವಾಭಾವ ಬೆಳೆಸಿಕೊಳ್ಳಬೇಕು ಎಂದು ಡಿ.ಆರ್. ಶಹಾ ಕರೆ ನೀಡಿದರು. ಆಡಳಿತಾಧಿಕಾರಿ ಕಲ್ಪನಾ ಶಹಾ, ಶೈಕ್ಷಣಿಕ ಸಲಹೆಗಾರ ನಜೀರ ಹುಂಡೇಕರ, ಪ್ರಾಂಶುಪಾಲ ಪ್ರಕಾಶ ಪಾಟೀಲ, ಉಪಪ್ರಾಂಶುಪಾಲೆ ಅನಿಶಾ ಕೆ.ಎ., ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 