ಎಸ್.ಎಸ್. ವಿದ್ಯಾ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ
Joyous Independence Day Celebration at S.S. Educational Institution
ತಾಳಿಕೋಟಿ 17 : ಪಟ್ಟಣದ ಪ್ರತಿಷ್ಠಿತ ಎಸ್.ಎಸ್. ವಿದ್ಯಾ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಚ್.ಎಸ್. ಪಾಟೀಲ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ವಿದ್ಯಾರ್ಥಿಗಳು ದೇಶದ ಬಹುದೊಡ್ಡ ಶಕ್ತಿಯಾಗಿದ್ದಾರೆ. ಅವರು ಆಸಕ್ತಿಯಿಂದ ಅಧ್ಯಯನ ಮಾಡಬೇಕು. ನಿರಂತರ ಅಧ್ಯಯನ ಹಾಗೂ ಕಠಿಣ ಪರಿಶ್ರಮದಿಂದ ಶ್ರೇಷ್ಠ ಸಾಧನೆ ಮಾಡಲು ಸಾಧ್ಯ ಎಂದು ಹೇಳಿದರು. ವಿದ್ಯಾರ್ಥಿಗಳು ಆದಷ್ಟು ಮೊಬೈಲ್ ಬಳಕೆಯನ್ನು ಕಡಿಮೆ ಮಾಡಬೇಕು. ಮೊಬೈಲ್ಗೆ ದಾಸರಾದರೆ ಜೀವನದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುವುದಿಲ್ಲ ಎಂದು ಅವರು ಕಿವಿಮಾತು ಹೇಳಿದರು.
ಉಪನ್ಯಾಸಕ ಶ್ರೀನಿವಾಸ ಬಸಂತಾಪೂರ ಮಾತನಾಡಿ, ಮನೆ-ಮನೆಯಲ್ಲಿ ದೇಶವನ್ನು ಕಾಯುವ ಯೋಧರು ಹುಟ್ಟಬೇಕು. ಪ್ರತಿಯೊಬ್ಬರಲ್ಲೂ ದೇಶಾಭಿಮಾನ ಹಾಗೂ ದೇಶಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಪ್ರಾಚಾರ್ಯರಾದ ಡಾ. ಎಚ್.ಬಿ. ನಡುವಿನಕೇರಿ, ಶಿವಕುಮಾರ ನಾಯಕ, ಜಿ.ಸಿ. ಪಾಟೀಲ, ಸಿದ್ಧಾರ್ಥ, ಎಸ್.ಬಿ. ಸಾಸನೂರ, ಎ.ಎಚ್. ಗೌಡರ, ಎಸ್.ಬಿ. ಮಂಗ್ಯಾಳ, ಮುಖ್ಯೋಪಾಧ್ಯಾಯ ಅಶೋಕ ಕಟ್ಟಿ, ಆಂಗ್ಲ ಮಾಧ್ಯಮ ಮುಖ್ಯಸ್ಥ ಉಮೇಶ ಜಿ. ಅಬ್ಬಿಗೇರಿ ಸೇರಿದಂತೆ ಸಂಸ್ಥೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಧ್ವಜಾರೋಹಣದ ಬಳಿಕ ಎಚ್.ಎಸ್. ಪಾಟೀಲ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಶಿಕ್ಷಕ ಬಿ.ಐ. ಹಿರೇಹೊಳಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 