ವಿಶ್ವ ಆರೈಕೆದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ನ್ಯಾ.ರಾಜೇಶ್ ಹೊಸಮನೆ ಹೇಳಿಕೆ
Justice Rajesh Hosamane's statement at the World Caregiver's Day event
ವಿಶ್ವ ಆರೈಕೆದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ನ್ಯಾ.ರಾಜೇಶ್ ಹೊಸಮನೆ ಹೇಳಿಕೆ
ಬಳ್ಳಾರಿ 29: ಪ್ರತಿಯೊಬ್ಬರ ಜೀವನದಲ್ಲಿ ಆರೈಕೆದಾರರ ಪಾತ್ರ ಮಹತ್ವದಾಗಿದ್ದು, ವಿಶೇಷ ಚೇತನರ ಹಾಗೂ ಹಿರಿಯರನ್ನು ಆರೈಕೆ ಮಾಡುವುದು ವಿಶೇಷ ಸೇವೆಯಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ ಹಾಗೂ ಅನುಗ್ರಹ ವಿಶೇಷ ಮಕ್ಕಳ ವಸತಿ ರಹಿತ ಶಾಲೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಅನುಗ್ರಹ ವಿಶೇಷ ಮಕ್ಕಳ ವಸತಿ ರಹಿತ ಶಾಲೆಯಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವ ಆರೈಕೆದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿಶೇಷ ಚೇತನರ ಸೇವೆ ಮಾಡುವ ಅವಕಾಶ ಎಲ್ಲರಿಗೂ ದೊರೆಯುವುದಿಲ್ಲ. ಅವರ ಸೇವೆ ಮಾಡುವಂತಹ ಪೋಷಕರು, ಶಿಕ್ಷಕರು, ಆಯಾಗಳು ದೇವರ ಸಮಾನ ಎಂದು ಆರೈಕೆದಾರರ ಸೇವೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಗೋವಿಂದಪ್ಪ ಹೆಚ್.ಎಂ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಬಳ್ಳಾರಿ ಧರ್ಮ ಕ್ಷೇತ್ರದ ಕೋಶಾಧಿಕಾರಿಗಳಾದ ಫದಾರ್ ಐವನ್ ಫಿಂಟೂ, ಚೆಂಗಾರೆಡ್ಡಿ, ಬುದ್ದಿಮಾಂದ್ಯ ಮಕ್ಕಳ ವಸತಿಯುತ ಶಾಲೆಯ ಗುರುಮೂರ್ತಿ, ಅನುಗ್ರಹ ಬುದ್ದಿಮಾಂದ್ಯ ಮಕ್ಕಳ ವಸತಿ ರಹಿತ ಶಾಲೆಯ ಮುಖ್ಯ ಗುರುಗಳಾದ ಸಿಸ್ಟರ್ ಪ್ರಜ್ಞಾ, ಅನುಗ್ರಹ ಶಾಲೆಯ ಹಿರಿಯ ಶಿಕ್ಷಕಿ ಸಿಸ್ಟರ್ ಮರ್ಲಿನ್, ಶಿಕ್ಷಕರಾದ ವಸಂತ್ ಕುಮಾರ್, ಆರೈಕೆದಾರರ ಪರವಾಗಿ ಪೋಷಕರಾದ ಶಿವರಾಮ್ ಹಾಗೂ ಇತರರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 