ನವದೆಹಲಿ, ನ 9 : ಇನ್ನು ಕೆಲವೇ ನಿಮಿಷಗಳಲ್ಲಿ ರಾಮ ಜನ್ಮಭೂಮಿ - ಬಾಬರಿ ಮಸೀದಿ ಭೂ ವಿವಾದದ ಅಂತಿಮ ತೀಪು ಸುಪ್ರೀಂಕೋರ್ಟ್ ನ ಸಂವಿಧಾನ ಪೀಠದಿಂದ ಪ್ರಕಟವಾಗಲಿದೆ. ಈ ಪೀಠದಲ್ಲಿ ಕರ್ನಾಟಕದ ನ್ಯಾಯಮೂರ್ತಿಯೊಬ್ಬರು ಇದ್ದಾರೆ ಎಂಬುದು ಮಹತ್ವದ ವಿಷಯವಾಗಿದೆ. ಸುಪ್ರೀಂಕೋರ್ಟ್ ನ 46 ನೇ ಮುಖ್ಯ ನ್ಯಾಯಮೂರ್ತಿಯಾಗಿರುವ ರಂಜನ್ ಗೋಗಾಯ್ ಇದೇ 17 ರಂದು ಅಧಿಕಾರದಿಂದ ನಿವೃತ್ತರಾಗುತ್ತಿದ್ದಾರೆ. ಮೂಲತಃ ಅಸ್ಸಾಂ ನವರಾದ ಗೊಗಾಯ್ ಈ ಮೊದಲು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಿದ್ದರು. ಇನ್ನು ಈ ಪೀಠದಲ್ಲಿರುವ ಮತ್ತೊಬ್ಬ ನ್ಯಾಯಮೂರ್ತಿ ಶರದ್ ಅರವಿಂದ್ ಬೋಬ್ಡೆ ಅವರು ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಇದೇ 18 ರಂದು ಅಧಿಕಾರ ಸ್ವೀಕರಿಸಲಿದ್ದಾರೆ. ನ್ಯಾಯಮೂರ್ತಿ ಬೋಬ್ಡೆ ಮಹಾರಾಷ್ಟ್ರದ ನಾಗಪುರದಲ್ಲಿ ಜನಿಸಿದವರು. ಬಾಂಬೆ ಹೈಕೋರ್ಟ್ ನ ನ್ಯಾಯಮೂರ್ತಿಗಳಾಗಿ ಮತ್ತು ಮಧ್ಯಪ್ರದೇಶ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿಯೂ ಕೆಲಸ ಮಾಡಿದ್ದಾರೆ. ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರು ಮೂಲತಃ ಕರ್ನಾಟಕದವರು ಎಂಬುದು ಮಹತ್ವದ ಸಂಗತಿಯಾಗಿದೆ. ಇನ್ನು ನ್ಯಾಯಮೂರ್ತಿ ಚಂದ್ರಚೂಡ್ ಬಾಂಬೆ ಹೈಕೋರ್ಟ, ಅಲಹಾಬಾದ್ ಹೈಕೋರ್ಟ್ ನಲ್ಲಿ ಸೇವೆ ಸಲ್ಲಿಸಿದ್ದಾರೆ. ಈ ಪೀಠದಲ್ಲಿರುವ ಮತ್ತೊಬ್ಬ ನ್ಯಾಯಮೂರ್ತಿ ಅಶೋಕ್ ಭೂಷಣ್.