ಕೆ. ಎಚ್‌. ಕಬ್ಬೂರ ತಾಂತ್ರಿಕ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಉದ್ಯೋಗಕ್ಕೆ ಆಯ್ಕೆ

K. H. Kabbur Technical Education Institute students selected for employment

ಧಾರವಾಡ 23: ನಗರದ ಪ್ರತಿಷ್ಠಿತ ಜನತಾ ಶಿಕ್ಷಣ ಸಮಿತಿಯ ಕೆ. ಎಚ್‌. ಕಬ್ಬೂರ ತಾಂತ್ರಿಕ ಶಿಕ್ಷಣ ಸಂಸ್ಥೆಯಲ್ಲಿ ರಾಯಲ್ ಎನ್‌ಫೀಲ್ಡ್‌ ಬೈಕ್ ಕಂಪನಿಯವರಿಂದ ಆಯೋಜಿಸಿದ್ದ ಕ್ಯಾಂಪಸ್ ಸಂದರ್ಶನದಲ್ಲಿ ಇಲೆಕ್ಟ್ರಾನಿಕ್ಸ್‌ ್ಘ ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ 35, ಮೆಕಾಟ್ರಾನಿಕ್ಸ್‌ ಇಂಜಿನಿಯರಿಂಗ್ ವಿಭಾಗದ 15, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ 5, ಇಲೆಕ್ಟಿಕಲ್ ್ಘ ಇಲೆಕ್ಟ್ರಾನಿಕ್ಸ್‌ ಇಂಜಿನಿಯರಿಂಗ್ ವಿಭಾಗದ 3 ಹಾಗೂ ಆಟೋಮೋಬೈಲ್ ಇಂಜಿನಿಯರಿಂಗ್ ವಿಭಾಗದ 2 ವಿದ್ಯಾರ್ಥಿಗಳು, ಒಟ್ಟು 60 ವಿದ್ಯಾರ್ಥಿಗಳಿಗೆ ಸಂಸ್ಥೆಯ ಪ್ರಾಚಾರ್ಯರಾದ ಶ್ರೀಮತಿ ವಿ. ಆರ್‌. ತಿವಾರಿ ಅವರು ನೇಮಕಾತಿ ಆದೇಶದ ಪ್ರತಿಯನ್ನು ನೀಡಿದರು.ಈ ಸಂದರ್ಭದಲ್ಲಿ ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದ ಅವರು ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಶುಭಕೋರಿ ಅಭಿನಂದಿಸಿದ್ದಾರೆ.